ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ

ಕೊರೊನಾ ಸೋಂಕಿನಿಂದ ನರಳಿ ನರಳಿ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನೆಮ್ಮದಿಯಿಂದ ನಡೆಸಲು ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಚಿತಾಗಾರಗಳ ಮುಂದೆ ಜನ ಪರದಾಡುತ್ತಿರುವ ದೃಶ್ಯಗಳು ಇಂದಿಗೂ ಬೆಂಗಳೂರಿನಲ್ಲಿ ಕಾಣಿಸುತ್ತಿವೆ.

ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ
ಚಿತಾಗಾರ
Follow us
sandhya thejappa
|

Updated on: May 02, 2021 | 12:46 PM

ದೇವನಹಳ್ಳಿ: ಕೊರೊನಾ ಎರಡನೇ ಅಲೆಯ ಆರ್ಭಟದಿಂದ ಚಿತಾಗಾರದ ಮುಂದೆ ಆ್ಯಂಬುಲೆನ್ಸ್​ಗಳು ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದ ಶವಸಂಸ್ಕಾರಕ್ಕೂ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಈ ಬೆನ್ನೆಲ್ಲೆ ಇದೀಗ ಅಂತ್ಯಸಂಸ್ಕಾರಕ್ಕೆ ಪರದಾಡುವವರ ನೋವಿಗೆ ದೇವಾಂಗ ಮಂಡಳಿ ಸ್ಪಂದಿಸಿದ್ದು, ಉಚಿತ ಅಂತ್ಯಸಂಸ್ಕಾರಕ್ಕೆ ಖಾಸಗಿ ಚಿತಾಗಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ಸೋಂಕಿನಿಂದ ನರಳಿ ನರಳಿ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನೆಮ್ಮದಿಯಿಂದ ನಡೆಸಲು ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಚಿತಾಗಾರಗಳ ಮುಂದೆ ಜನ ಪರದಾಡುತ್ತಿರುವ ದೃಶ್ಯಗಳು ಇಂದಿಗೂ ಬೆಂಗಳೂರಿನಲ್ಲಿ ಕಾಣಿಸುತ್ತಿವೆ. ಹೀಗಾಗಿ ಕೊರೊನಾದಿಂದ ಸಾವನ್ನಪಿರುವ ಸೋಂಕಿತರ ವಿಧಿ ವಿಧಾನಗಳನ್ನು ಪೂರೈಸಲು ಅನುವು ಮಾಡಿಕೊಡುವ ಮೂಲಕ ದೇವಾಂಗ ಮಂಡಳಿ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ದೇವಾಂಗ ಮಂಡಳಿಯ ಖಾಸಗಿ ಮುಕ್ತಿಧಾಮದಲ್ಲಿ ಆರು ಸಿಲಿಕಾನ್ ಬಾಕ್ಸ್​ಗಳಿದ್ದು, ಕೆಲ ದಿನಗಳಿಂದ ಮುಕ್ತಿಧಾಮಕ್ಕೆ ಬೀಗ ಜಡಿದಿದ್ದರು.

ಆದರೆ ಬೆಂಗಳೂರು ಸೇರಿದಂತೆ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊವಿಡ್ ಸೋಂಕಿನಿಂದ ಮೃತಪಟ್ಟ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ದಿನಗಟ್ಟಲೆ ಚಿತಾಗಾರದ ಮುಂದೆ ಸಂಬಂಧಿಕರು ಪರದಾಡುತ್ತಿದ್ದರು. ಹೀಗಾಗಿ ಸಾವು ನೋವುಗಳನ್ನ ಮಾಧ್ಯಮಗಳಲ್ಲಿ ಕಂಡ ದೊಡ್ಡಬಳ್ಳಾಪುರದ ದೇವಾಂಗ ಮಂಡಳಿ ಸದಸ್ಯರು ಇದೀಗ ಬೀಗ ಹಾಕಿದ್ದ ಮುಕ್ತಿಧಾಮವನ್ನ ಪುನರಾರಂಭಿಸಿದ್ದಾರೆ.

ಚಿತಾಗಾರದಲ್ಲಿ ಬೆಳಗಿನಿಂದ ಸಂಜೆವರೆಗೂ ಕೊರೊನಾ ಇಲ್ಲದ ಮೃತದೇಹಗಳಿಗೆ ಮತ್ತು ಸಂಜೆ 4 ಗಂಟೆ ನಂತರ ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಿದೆ. ಮೃತದೇಹ ಸುಡಲು ಸೌದೆ ಮತ್ತು ಅಂತಿಮ ವಿಧಿ ವಿಧಾನಗಳ ಕಾರ್ಯಕ್ಕೆ ಬೇಕಾದ ಸಾಮಾಗ್ರಿಗಳನ್ನು ಮಂಡಳಿ ಉಚಿತವಾಗಿ ನೀಡುತ್ತಿದ್ದಾರೆ. ಅಲ್ಲದೆ ಶವಸಂಸ್ಕಾರ ಮಾಡಿದ ನಂತರ ಮುಕ್ತಿಧಾಮದಲ್ಲಿ ಸ್ನಾನ ಮಾಡುವ ವ್ಯವಸ್ಥೆಯನ್ನು ಕುಟುಂಬಸ್ಥರಿಗೆ ಮಾಡಿಕೊಡಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಚಿತಾಗಾರದಲ್ಲಿ ಸಾರ್ವಜನಿಕರು ಅಂತ್ಯಕ್ರಿಯೆ ಮಾಡಲು ದೇವಾಂಗ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗುವುದಿಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ

ಅತಿ ಹೆಚ್ಚು ತೂಕದ ಮಾವಿನ ಹಣ್ಣು ಬೆಳೆದು ವಿಶ್ವ ದಾಖಲೆಗೆ ಹೆಸರಾದ ಕೊಲಂಬಿಯಾ ರೈತರು

(Devanga mandali has given free devanahalli)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ