ದೇವರಾಜ ಅರಸ್​ ಟರ್ಮಿನಲ್ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್.ವೀರಯ್ಯ ಬಂಧನ

ಕರ್ನಾಟಕದಲ್ಲಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಹಗರಣ ಸಂಬಂಧ ಇಬ್ಬರು ಕಾಂಗ್ರೆಸ್​​ ಶಾಸಕರಿಗೆ ಬಂಧನದ ಭೀತಿ ಎದುರಾಗಿದ್ದರೆ, ಮತ್ತೊಂದೆಡೆ ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ ಸಂಬಂಧ ಬಿಜೆಪಿ ನಾಯಕ, ಮಾಜಿ ಶಾಸಕ ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ.

ದೇವರಾಜ ಅರಸ್​ ಟರ್ಮಿನಲ್ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್.ವೀರಯ್ಯ ಬಂಧನ
ಡಿಎಸ್ ವೀರಯ್ಯ
Follow us
Kiran HV
| Updated By: ರಮೇಶ್ ಬಿ. ಜವಳಗೇರಾ

Updated on:Jul 12, 2024 | 6:52 PM

ಬೆಂಗಳೂರು, (ಜುಲೈ.12): ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ (ಡಿಡಿಯುಟಿಟಿಎಲ್‌) ಹಗರಣ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌.ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆ ಸರ್ಕಾರ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು, ಇಂದು (ಜುಲೈ 12) ಮಾಜಿ ಶಾಸಕ ವೀರಯ್ಯ ಅವರನ್ಜು ಬಂಧಿಸಿದೆ.

2021ರಿಂದ 2023ರ ನಡುವೆ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ  ಅಧ್ಯಕ್ಷರಾಗಿದ್ದಾಗ 47.10 ಕೋಟಿ ರೂಪಾಯಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿಎನ್​ ಶಿವಪ್ರಸಾದ್ ವಿಲ್ಸನ್​​ ಗಾರ್ಡ್​ನ್​ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ 2023 ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು. ಡಿ.ಎಸ್. ವೀರಯ್ಯ ಅವರು ನಿಗಮದ ಮಾಜಿ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಮೇಲೆ 55 ಕೋಟಿ ರೂಪಾಯಿ ನಕಲಿ ಕಾಮಗಾರಿ ನಡೆಸಿದ್ದ ಆರೋಪ; ಲೋಕಾಯುಕ್ತ ದಾಳಿ

ನಿಗಮದ ಅಂದಿನ ಅಧ್ಯಕ್ಷರಾಗಿದ್ದ ವೀರಯ್ಯ ವಿರುದ್ಧ ವಿಲ್ಸನ್​ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯನ್ನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಏನೀದು ಅಕ್ರಮ?

2021ರ ಅಕ್ಟೋಬರ್ 25ರಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆದರೆ ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ಸರ್ಕಾರ ಆದೇಶಿಸಿತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Fri, 12 July 24