AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಶ್ರೇಯಸ್​ ಪಟೇಲ್​ ಆಯ್ಕೆ ಅಸಿಂಧು ಕೋರಿ ಚುನಾವಣಾ ಆಯೋಗಕ್ಕೆ ದೇವರಾಜೇಗೌಡ ಪತ್ರ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಾಂಗ್ರೆಸ್​ನ ಶ್ರೇಯಸ್ ಪಾಟೀಲ್​ ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ. ಆದರೆ, ಶ್ರೇಯಸ್​ ಪಟೇಲ್​ ಅವರ ಆಯ್ಕೆ ಅಸಿಂಧು ಕೋರಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಸಂಸದ ಶ್ರೇಯಸ್​ ಪಟೇಲ್​ ಆಯ್ಕೆ ಅಸಿಂಧು ಕೋರಿ ಚುನಾವಣಾ ಆಯೋಗಕ್ಕೆ ದೇವರಾಜೇಗೌಡ ಪತ್ರ
ಸಂಸದ ಶ್ರೇಯಸ್​ ಪಟೇಲ್, ದೇವರಾಜೇಗೌಡ
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ|

Updated on: Aug 24, 2024 | 12:57 PM

Share

ಹಾಸನ, ಆಗಸ್ಟ್​ 23: ಹಾಸನದ (Hassan) ಕಾಂಗ್ರೆಸ್ (Congress)​ ಸಂಸದ ಶ್ರೇಯಸ್​ ಪಟೇಲ್ (Shreyas Patel)​ ಅವರ ಆಯ್ಕೆ ಅಸಿಂಧು ಕೋರಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devaraje gowda) ಚುನಾವಣಾ ಆಯೋಗಕ್ಕೆ (Election Commission) ಪತ್ರ ಬರೆದಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ನೂತನ ಸಂಸದ ಶ್ರೇಯಸ್​ ಪಟೇಲ್ ಅವರು​ ಆಸ್ತಿ ವಿವರ ಬಹಿರಂಗಪಡಿಸಿಲ್ಲ. ಅಲ್ಲದೇ, ಪ್ರಚಾರದ ವೇಳೆ ಮಾಡಲಾದ ಖರ್ಚುವೆಚ್ಚದ ಮಾಹಿತಿಯನ್ನು ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಮುಚ್ಚಿಡಲಾಗಿದೆ ಎಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆಗೂ ಕೂಡ ತಪ್ಪು ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡುವುದು ಚುನಾವಣಾ ಅಕ್ರಮವಾಗಿದೆ. ಶ್ರೇಯಸ್​ ಪಟೇಲ್​ ಆಯ್ಕೆ ಅಸಿಂಧು ಕೋರಿ ನನ್ನ ಪುತ್ರನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಸಿದ್ದೇನೆ. ಯಾವುದೇ ಆಮಿಷಕ್ಕೆ ಬಲಿಯಾಗಬಾರದೆಂದು ಹೀಗೆ ಮಾಡಿದ್ದೇನೆ. 3-4 ತಿಂಗಳಲ್ಲಿ ಶ್ರೇಯಸ್ ಪಟೇಲ್​ ಅನರ್ಹರಾಗುತ್ತಾರೆ. ಶ್ರೇಯಸ್​ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ಬಿಡುಗಡೆ ಮಾಡಿ ಲಾಭ ಪಡೆದುಕೊಂಡಿದ್ದಾರೆ. ಈ ಬಗ್ಗೆಯೂ ಕೂಡ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದರು.

ಇದನ್ನೂ ಓದಿ: ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಜನರ ಸಿಂಪತಿಗಾಗಿ ಭಾರಿ ಬೆಲೆಬಾಳುವ ಆಸ್ತಿಯನ್ನು ಕಡಿಮೆ ಬೆಲೆ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣಾ ಖರ್ಚುವೆಚ್ಚದ ಬಗ್ಗೆ ಕೂಡ ತಪ್ಪಾಗಿ ಮಾಹಿತಿ ನೀಡಿದ್ದಾರೆ. ಚುನಾವಣಗೆ ಹೆಚ್ಚವರಿಯಾಗಿ 21 ಲಕ್ಷ ಖರ್ಚು ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿಲ್ಲ. ಅಂದಿನ‌ ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಖರ್ಚುವೆಚ್ಚವನ್ನ ಮುಚ್ಚಿಡಲಾಗಿದೆ ಎಂದು ಆರೋಪಿಸಿದರು.

ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್

ಆಸ್ತಿ ವಿವರದ ಬಗ್ಗೆ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್​ ವಿಚಾರಣೆ ನಡೆಸಿದ್ದು, ಈ ಸಂಬಂಧ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್​ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್