ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ; ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ

ಆಷಾಢದಲ್ಲಿ ದೇವಸ್ಥಾನಕ್ಕೆ ಹೆಚ್ಚು ಹೆಚ್ಚು ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಆಗಮಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ; ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ
ಮೈಸೂರು ಚಾಮುಂಡಿ ಬೆಟ್ಟ (ಸಂಗ್ರಹ ಚಿತ್ರ)
Edited By:

Updated on: Jul 06, 2021 | 11:45 AM

ಮೈಸೂರು: ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಕೊರೊನಾ ಆತಂಕ ಇನ್ನು ಕಡಿಮೆಯಾಗಿಲ್ಲ. ಆಷಾಢದಲ್ಲಿ ದೇವಸ್ಥಾನಕ್ಕೆ ಹೆಚ್ಚು ಹೆಚ್ಚು ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಆಗಮಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜಿಲ್ಲಾಡಳಿತ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ನಾಲ್ಕು ಆಷಾಢ ಶುಕ್ರವಾರ ಮತ್ತು ಎರಡು ಅಮಾವಾಸ್ಯೆ ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ನಿರ್ಬಂಧ ದಿನಗಳು
ಆಷಾಡ ಅಮಾವಾಸ್ಯೆ- ಜುಲೈ 9
ಮೊದಲನೇ ಆಷಾಡ ಶುಕ್ರವಾರ- ಜುಲೈ 16
ಎರಡನೇ ಆಷಾಡ ಶುಕ್ರವಾರ, ಅಮ್ಮನವರ ವರ್ಧಂತಿ,- ಜುಲೈ 23
ಮೂರನೇ ಆಷಾಢ ಶುಕ್ರವಾರ- ಜುಲೈ 30
ನಾಲ್ಕನೇ ಆಷಾಢ ಶುಕ್ರವಾರ- ಆಗಸ್ಟ್ 6
ಭೀಮನ ಆಮಾವಾಸ್ಯೆ – ಆಗಸ್ಟ್ 8

ಆಷಾಡ ಮಾಸದ ಶನಿವಾರ, ಭಾನುವಾರ ಮತ್ತು ಸರ್ಕಾರಿ ಸಾರ್ವತ್ರಿಕ ರಜಾ ದಿನಗಳಂದು ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇಂದಿನಿಂದ (ಜುಲೈ 6) ಪ್ರತಿದಿನ ಸಂಜೆ 6 ಘಂಟೆ ನಂತರವೂ ಭಕ್ತರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಕೊರೊನಾ ಹರಡುವ ಭೀತಿ ಹಿನ್ನೆಲೆ ಜಿಲ್ಲಾಡಳಿತ ಈ ನಿರ್ಧಾರ ತೆಗೆದುಕೊಂಡಿದೆ. ಚಾಮುಂಡಿ ಬೆಟ್ಟಕ್ಕೆ ಕೇವಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು, ಅರ್ಚಕರಿಂದ ಪೂಜಾ, ವಿಧಿವಿಧಾನ ಕಾರ್ಯಕ್ರಮಗಳು ನಡೆಯುತ್ತವೆ.

ಇದನ್ನೂ ಓದಿ

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ನಿರ್ಮಾಣ ಕಾರ್ಯ ವಿಳಂಬ; ಚಿತ್ರದುರ್ಗದ ರೈತರಿಂದ ಆಕ್ರೋಶ

ಮೇಕೆದಾಟು ಯೋಜನೆಯನ್ನು ಪ್ರಾರಂಭಿಸಲಾಗುವುದು; ಪತ್ರದ ವಿಚಾರಕ್ಕೆ ರಾಜ್ಯ ಸರ್ಕಾರ ಸ್ಪಷ್ಟೀಕರಣ

(devotees entry prohibited during Ashada Fridays in Chamundi Hills ordered by Mysuru district administration)