ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷ 2026 ಅನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕೈಂಕರ್ಯಗಳು, ಅಭಿಷೇಕ, ಮಂಗಳಾರತಿ ಹಾಗೂ ಆಕರ್ಷಕ ಪುಷ್ಪಾಲಂಕಾರ ಸೇವೆಗಳು ನೆರವೇರಿದವು. ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದಲೂ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು.
ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ, ಹೂ ಮತ್ತು ಎಲೆಗಳಿಂದ ಅಲಂಕರಿಸಲಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 01, 2026 12:07 PM
