ಹೈಟೆಕ್ ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಮೆಚ್ಚುಗೆ; 1 ಲಕ್ಷ ರೂ. ಬಹುಮಾನ ನೀಡಿ ಗೌರವ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸರ ಕಾರ್ಯಾಚರಣೆ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡಲು ಯತ್ನಿಸುತ್ತಿದ್ದ ನಾಲ್ವರು ಹೈಟೆಕ್ ಕಳ್ಳರು ಸೆರೆ ಸಿಕ್ಕಿದ್ದಾರೆ. ಬಂಧಿತರಿಂದ 10 ಸಾವಿರ ನಗದು ಸೇರಿದಂತೆ 2 ರಿವಾಲ್ವರ್, 30 ಬುಲೆಟ್ಸ್, ಚಾಕು, ಬೈಕ್ ವಶಕ್ಕೆ ಪಡೆಯಲಾಗಿದೆ.

ಹೈಟೆಕ್ ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಮೆಚ್ಚುಗೆ; 1 ಲಕ್ಷ ರೂ. ಬಹುಮಾನ ನೀಡಿ ಗೌರವ
ಪೊಲೀಸರು ವಶಪಡಿಸಿಕೊಂಡ ವಸ್ತುಗಳು
TV9kannada Web Team

| Edited By: preethi shettigar

Jul 20, 2021 | 1:56 PM

ಚಿಕ್ಕಮಗಳೂರು: ಡಿಜಿ ಐಜಿಪಿ ಪ್ರವೀಣ್ ಸೂದ್ ಹೈಟೆಕ್ ದರೋಡೆಕೋರರನ್ನು ಬಂಧಿಸಿದ ಪೊಲೀಸರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇವರಿಗೆ 1 ಲಕ್ಷ ಬಹುಮಾನ ನೀಡಿ ಗೌರವಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸರ ಕಾರ್ಯಾಚರಣೆ ವೇಳೆ ಹೆದ್ದಾರಿಯಲ್ಲಿ ದರೋಡೆ ಮಾಡಲು ಯತ್ನಿಸುತ್ತಿದ್ದ ನಾಲ್ವರು ಹೈಟೆಕ್ ಕಳ್ಳರು ಸೆರೆ ಸಿಕ್ಕಿದ್ದಾರೆ. ಬಂಧಿತರಿಂದ 10 ಸಾವಿರ ನಗದು ಸೇರಿದಂತೆ 2 ರಿವಾಲ್ವರ್, 30 ಬುಲೆಟ್ಸ್, ಚಾಕು, ಬೈಕ್ ವಶಕ್ಕೆ ಪಡೆಯಲಾಗಿದೆ.ತನಿಖೆ ವೇಳೆ ಉತ್ತರ ಪ್ರದೇಶದಿಂದ ರಿವಾಲ್ವರ್ ಖರೀದಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜೂಜಾಟದ ಅಡ್ಡೆಯನ್ನೇ ಟಾರ್ಗೆಟ್ ಮಾಡಿಕೊಂಡಿದ್ದ ನಾಲ್ವರ ಈ ತಂಡ, ಜೂಜಾಡುತ್ತಿದ್ದ ಸ್ಥಳಕ್ಕೆ ಹೋಗಿ ಗಾಳಿಯಲ್ಲಿ ಫೈರ್ ಮಾಡಿ ಹಣ ದೋಚುತ್ತಿದ್ದರು. ಅಲ್ಲದೆ ಗ್ಯಾಂಗ್ ವಾರ್ ನಡೆಸುವುದಕ್ಕೆ ಈ ತಂಡ ಹೊಂಚುಹಾಕಿತ್ತು. ಇನ್ನು ಕೆಲವು ದಿನಗಳ ಹಿಂದೆ ಹಾಸನದ ಸಮೀಪ ಯಾಚನಹಳ್ಳಿ ಚೇತನ್ ಮೇಲೆ ಫೈರ್ ಕೂಡ ಮಾಡಿದ್ದರು. ಸದ್ಯ ಮಂಡ್ಯದ ಶಿವಕುಮಾರ್, ಹೊಳೆನರಸೀಪುರದ ಕುಮಾರಸ್ವಾಮಿ, ಜಾರ್ಖಂಡ್ ಮೂಲದ ಅಜಯ್ ಕುಮಾರ್ ಸಿಂಗ್, ಮೂಡಿಗೆರೆಯ ಶಿವಕುಮಾರ್​ರನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಬಂಧಿಸಲಾಗಿದೆ.

ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲಿ ಆರೋಪಿಗಳ ಬಂಧನ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲೇ ಆರೋಪಿಗಳ ಬಂಧಿಸಿದ ಕಾರಣ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ಘೋಷಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ ಬಹುಮಾನ ಘೋಷಿಸಿ ತನಿಖಾ ತಂಡವನ್ನು ಶ್ಲಾಘಿಸಿದ್ದಾರೆ. ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲಿ ಕಾಟನ್ ಪೇಟೆ ಪೊಲೀಸ್ ಸಿಬ್ಬಂದಿ, ಪಶ್ಚಿಮ ವಿಭಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್​ ಹತ್ಯೆ ಪ್ರಕರಣದ ತನಿಖೆಗೆಂದು ಪೊಲೀಸರು 6 ವಿಶೇಷ ತಂಡಗಳನ್ನು ರಚಿಸಿದ್ದರು. ಕಾಟನ್​ಪೇಟೆ ಇನ್​ಸ್ಪೆಕ್ಟರ್ ಚಿದಾನಂದ ಮೂರ್ತಿ, ಸಿಟಿಮಾರ್ಕೆಟ್ ಇನ್​ಸ್ಪೆಕ್ಟರ್ ಕುಮಾರಸ್ವಾಮಿ, ಕಾಮಾಕ್ಷಿಪಾಳ್ಯ ಇನ್​ಸ್ಪೆಕ್ಟರ್ ಪ್ರಶಾಂತ್, ಉಪ್ಪಾರಪೇಟೆ ಇನ್​ಸ್ಪೆಕ್ಟರ್ ಶಿವಸ್ವಾಮಿ, ಕಲಾಸಿಪಾಳ್ಯ ಇನ್​ಸ್ಪೆಕ್ಟರ್ ಚಂದ್ರಕಾಂತ್, ಚಾಮರಾಜಪೇಟೆ ಇನ್​ಸ್ಪೆಕ್ಟರ್ ಲೋಕಾಪುರ ನೇತೃತ್ವದ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದವು.

ಕೊಲೆಗೆ ಸಂಬಂಧಿಸಿದಂತೆ ರಾತ್ರಿಯೇ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. 39 ಜನರನ್ನು ಪೊಲೀಸರು ತಮ್ಮ ವಶದಲ್ಲಿಯೇ ಇರಿಸಿಕೊಂಡು ರಾತ್ರಿಯಿಡೀ ವಿಚಾರಣೆ ನಡೆಸಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪೀಟರ್ ಜೊತೆಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದ. ಇವನಿಂದ ಮತ್ತಷ್ಟು ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದರು.

ಎಲೆಕ್ಟ್ರಾನಿಕ್ ಸಿಟಿ, ಹೋಸೂರು ರಸ್ತೆ, ಸಿಂಗೇನ ಅಗ್ರಹಾರ, ಚಂದಾಪುರ, ವರ್ತೂರು, ಹುಸ್ಕೂರು ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಆರೋಪಿಗಳ ಪತ್ತೆಗಾಗಿ ಅಹೋರಾತ್ರಿ ನಡೆದ ಕಾರ್ಯಾಚರಣೆಯಲ್ಲಿ 30ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಇರಾನಿ‌ ಗ್ಯಾಂಗ್​ ಹೆಡೆಮುರಿಗೆ ಕಟ್ಟಿದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ಬಹುಮಾನ

ರೇಖಾ ಕದಿರೇಶ್ ಹತ್ಯೆ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ತನಿಖಾ ತಂಡಕ್ಕೆ 1.25 ಲಕ್ಷ ಬಹುಮಾನ ಘೋಷಣೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada