IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್

ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ.

IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್
ಭಾಸ್ಕರ್ ರಾವ್
Follow us
| Updated By: guruganesh bhat

Updated on:Sep 17, 2021 | 4:45 PM

ಬೆಂಗಳೂರು: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್​​ ಮಹಾನಿರ್ದೇಶಕ ಪ್ರವೀಣ್ ಸೂದ್​ರಿಂದ ಒಪ್ಪಿಗೆ ಸಿಕ್ಕಿದೆ. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದಾರೆ. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿದೆ. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿದೆ. ಇನ್ನು ರಾಜ್ಯ ಸರ್ಕಾರದ ‌ಮಟ್ಟದಲ್ಲಿ ಒಪ್ಪಿಗೆ ಸೂಚಿಸುವುದು ಬಾಕಿ ಇದೆ.

ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವುದು ಈ ಮೊದಲು ತಿಳಿದುಬಂದಿತ್ತು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ಸದ್ಯ ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿದ್ದಾರೆ.

ನಿವೃತ್ತಿಗೆ 3 ವರ್ಷ ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದರು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ, ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದರು. ಭಾಸ್ಕರ್ ರಾವ್ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕು. ಅಲ್ಲಿಯವರೆಗೆ ಭಾಸ್ಕರ್ ರಾವ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇದನ್ನೂ ಓದಿ: IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?

Published On - 3:38 pm, Fri, 17 September 21

ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ