ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ
ಡಿಜಿ ಐಜಿಪಿ ಪ್ರವೀಣ್ ಸೂದ್
Follow us
TV9 Web
| Updated By: ganapathi bhat

Updated on:Aug 02, 2021 | 5:32 PM

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಫ್​ಐಆರ್ ಆದರೂ ಬಂಧಿಸದಿದ್ದವರ ಮಾಹಿತಿ ಸಂಗ್ರಹಿಸಲು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ದೆಹಲಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ರಾಕೇಶ್ ಅಸ್ತಾನಾ !

(DG IGP Praveen Sood on Police Officials contact with Criminal Background People Celebrating Personal Programs in Station)

Published On - 5:30 pm, Mon, 2 August 21

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ