AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು

ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು ನೀಡುವಂತಹ ಹೇಳಿಕೆಯನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ನೀಡಿದ್ದರು. ಇಡೀ ಪ್ರಕರಣದ ರೂವಾರಿ ತಮಿಳುನಾಡಿನ ತಿರುವಳ್ಳೂರ್ ಕಾಂಗ್ರೆಸ್ ಸಂಸದ ಸಸಿಕಾಂತ ಸೆಂಥಿಲ್ ಎಂದು ರೆಡ್ಡಿ ಆರೋಪಿಸಿದ್ದರು. ಈ ವಿಚಾರವಾಗಿ ಮೊದಲ ಬಾರಿಗೆ ಸೆಂಥಿಲ್ ಪ್ರತಿಕ್ರಿಯಿಸಿದ್ದು, ರೆಡ್ಡಿಗೆ ತಿರುಗೇಟು ನೀಡಿದ್ದಾರೆ. ಅವರು ಹೇಳಿದ್ದೇನು ಎಂಬುದು ಇಲ್ಲಿದೆ.

ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಮೊದಲ ಪ್ರತಿಕ್ರಿಯೆ, ಕಾಂಗ್ರೆಸ್ ಸಂಸದ ಹೇಳಿದ್ದಿಷ್ಟು
ಸಸಿಕಾಂತ್ ಸೆಂಥಿಲ್ ಹಾಗೂ ಜನಾರ್ದನ ರೆಡ್ಡಿ
Ganapathi Sharma
|

Updated on: Aug 20, 2025 | 11:34 AM

Share

ಬೆಂಗಳೂರು, ಆಗಸ್ಟ್ 20: ಧರ್ಮಸ್ಥಳದ  (Dharmasthalaವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಅವರು ಹೇಳಿದ್ದಾರೆ. ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ ಎಂದ ಸಸಿಕಾಂತ್ ಸೆಂಥಿಲ್, ನಾನು ಯಾವುದೇ ರಾಜ್ಯಸರ್ಕಾರಕ್ಕೆ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ರೆಡ್ಡಿ ಆರೋಪ ಕೇಳಿ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ. ನಾನು ಐಎಎಸ್​ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಅವರ (ರೆಡ್ಡಿ) ಬಂಧನ ಆಗಿತ್ತು. ನಾನು ಅವಾಗ ಮಾತ್ರ ರೆಡ್ಡಿಯವರನ್ನು ನೋಡಿದ್ದು ಎಂದು ಸೆಂಥಿಲ್ ಹೇಳಿದ್ದಾರೆ.

ಸಸಿಕಾಂತ್ ಸೆಂಥಿಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಜನಾರ್ದನ ರೆಡ್ಡಿ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ದೂರು ನೀಡಿದ್ದ ಪ್ರಕರಣ ಸಂಬಂಧ ಮಂಗಳವಾರ ಮಾತನಾಡಿದ್ದ ಜನಾರ್ದನ ರೆಡ್ಡಿ, ಇದರ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ತಮಿಳುನಾಡಿನ ಹಾಲಿ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದಿದ್ದರು. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಸದ ಸಸಿಕಾಂತ್ ಸೆಂಥಿಲ್ ಒತ್ತಡದ ಮೇರೆಗೆ ಎಸ್​ಐಟಿ ರಚನೆ ಮಾಡಿದೆ. ಸೆಂಥಿಲ್ ಅವರು ಕಾಂಗ್ರೆಸ್ ವರಿಷ್ಠರಿಗೆ ಆಪ್ತರಾಗಿದ್ದಾರೆ. ಅವರೇ ಎಸ್​ಐಟಿ ರಚನೆಗೆ ಒತ್ತಡ ಹಾಕಿದ್ದಾರೆ. ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವ. ಅಲ್ಲದೆ, ಸಸಿಕಾಂತ್ ಸೆಂಥಿಲ್ ಜತೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ರೆಡ್ಡಿ ಆರೋಪಿಸಿದ್ದರು.

ಇದನ್ನೂ ಓದಿ
Image
ಧರ್ಮಸ್ಥಳ ಕೇಸ್​: ಅನಾಮಿಕ ಮಾಸ್ಕ್ ಮ್ಯಾನ್ ತಮಿಳುನಾಡಿನವ ಎಂದ ರೆಡ್ಡಿ
Image
ಧರ್ಮಸ್ಥಳ ಪ್ರಕರಣ​: ಮಾಜಿ DC ಸಸಿಕಾಂತ್​ ಸೆಂಥಿಲ್​ ಷಡ್ಯಂತ್ರ ಎಂದ ರೆಡ್ಡಿ
Image
ಧರ್ಮಸ್ಥಳ ಪ್ರಕರಣ: ಅನನ್ಯಾ ಭಟ್ ನಾಪತ್ತೆ ಅಸಲಿಯತ್ತೇನು?
Image
ಧರ್ಮಸ್ಥಳದಲ್ಲಿ ಶವ ಹೂತಿದ್ದ ಪ್ರಕರಣ: ಆರ್​ಟಿಐ ಮಾಹಿತಿಯಲ್ಲಿ ಅಚ್ಚರಿಯ ಅಂಶ

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ದಕ್ಷಿಣ ಕನ್ನಡ ಮಾಜಿ ಡಿಸಿ ಸಸಿಕಾಂತ್​ ಸೆಂಥಿಲ್​ ಷಡ್ಯಂತ್ರ ಎಂದ ರೆಡ್ಡಿ

ಅಷ್ಟೇ ಅಲ್ಲದೆ, ಧರ್ಮಸ್ಥಳ ವಿಚಾರದಲ್ಲಿ ಸಸಿಕಾಂತ ಸೆಂಥಿಲ್ ವಿರುದ್ಧ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಲು ಕೂಡ ಸಿದ್ಧರಿರುವುದಾಗಿ ಜನಾರ್ದನ ರೆಡ್ಡಿ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ