AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ತಲೆಬುರುಡೆ ಕೇಸ್​: ತಿಮರೋಡಿ & ಟೀಂಗೆ ಹೈಕೋರ್ಟ್​ನಿಂದ ತಾತ್ಕಾಲಿಕ ರಿಲೀಫ್​

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಎಫ್‌ಐಆರ್ ತನಿಖೆಗೆ ನವೆಂಬರ್ 12ರವರೆಗೆ ನ್ಯಾಯಾಲಯ ತಡೆ ನೀಡಿದ್ದು, ಅರ್ಜಿದಾರರು ನೋಟಿಸ್‌ಗಳ ಕಾನೂನುಬಾಹಿರತೆಯನ್ನು ಪ್ರಶ್ನಿಸಿದ್ದರು. ತಮ್ಮ ಮೇಲಿನ ವೈರತ್ವದಿಂದ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು.

ಧರ್ಮಸ್ಥಳ ತಲೆಬುರುಡೆ ಕೇಸ್​: ತಿಮರೋಡಿ & ಟೀಂಗೆ ಹೈಕೋರ್ಟ್​ನಿಂದ ತಾತ್ಕಾಲಿಕ ರಿಲೀಫ್​
ಮಹೇಶ್ ಶೆಟ್ಟಿ ತಿಮರೋಡಿ. ಹೈಕೋರ್ಟ್​
Ramesha M
| Edited By: |

Updated on: Oct 30, 2025 | 6:48 PM

Share

ಬೆಂಗಳೂರು, ಅಕ್ಟೋಬರ್​​ 30: ಧರ್ಮಸ್ಥಳ ತಲೆಬುರುಡೆ ಕೇಸ್ (Dharmasthala Mass Burial Case)​ ವಿಚಾರವಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡಗೆ ಕರ್ನಾಟಕ ಹೈಕೋರ್ಟ್​ ತಾತ್ಕಾಲಿಕ ರಿಲೀಫ್​ ನೀಡಿದೆ. ಧರ್ಮಸ್ಥಳದ ಠಾಣೆಯ FIR 39/2025 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪರ-ವಿರೋಧ ವಾದ ಆಲಿಸಿ ಪ್ರಕರಣದ ತನಿಖೆಗೆ ನ.12ರವರೆಗೆ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬಾಲನ್​, ಈಗಾಲೇ 9 ಬಾರಿ ನೋಟಿಸ್​ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್ಐಆರ್​ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಯಾಪ್​, ಇಮೇಲ್​ಗಳಲ್ಲಿ ನೀಡಿದ್ದಾರೆ. BNSS ಸೆಕ್ಷನ್​​ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದ ಮಂಡಿಸಿದ್ದರು. ರಾಜಕೀಯ , ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಕೂರಿಸಲಾಗುತ್ತೆ. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅಜರ್ಜದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(a) ಅಡಿ ಎಫ್‌ಐಆರ್ ದಾಖಲಿಸಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದು ಬಾಲನ್​ ವಾದಿಸಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಕೇಸಿಗೆ ಬಿಗ್ ಟ್ವಿಸ್ಟ್:ಕೋರ್ಟ್‌ನಲ್ಲಿ ಚಿನ್ನಯ್ಯನ ಹೊಸ ಕಥೆ, ಎಸ್ಐಟಿಗೆ ಹೊಸ ತಲೆನೋವು

ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ವಾದ ಮಂಡಿಸಿದ್ದು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಗಿದ್ದು, ಈಗ ಆರೋಪಿಗಳನ್ನಾಗಿಸಿ ಇವರಿಗೆ ನೋಟಿಸ್ ನೀಡಲಾಗಿದೆ ಎಂದು ನ್ಯಾಯಾಲಕ್ಕೆ ತಿಳಿಸಿದ್ದಾರೆ. ಈ ವೇಳೆ ಇಷ್ಟೊಂದು ನೋಟಿಸ್​ ಕೊಟ್ಟಿರೋದು ಯಾಕೆ ಎಂಂದು ಪ್ರಶ್ನಿಸಿರುವ ಕೋರ್ಟ್​, ಪ್ರತ್ಯೇಕ ಎಫ್‌ಐಆರ್ ದಾಖಲಿಸಬಹುದಿತ್ತಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದಕ್ಕೆ ಉತ್ತರಿಸಿರುವ ಎಸ್‌ಪಿಪಿ ಜಗದೀಶ್, ದಾಖಲಿಸಿರುವ ಎಫ್ಐಆರ್​ನಲ್ಲೇ ತನಿಖೆ ಮುಂದುವರಿಸಬಹುದೆಂದು ಸುಪ್ರೀಂಕೋರ್ಟ್ ತೀರ್ಪಿದೆ. 35(3) ಅಡಿ ನೋಟಿಸ್ ಜಾರಿಗೊಳಿಸಿದ ಬಳಿಕ ಅರ್ಜಿದಾರರು ಬಂದಿಲ್ಲ. ಈಗ ಹೊಸದಾಗಿ 35(3) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು