AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಬುರುಡೆ ಗ್ಯಾಂಗ್‌ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧ: ಚಾರ್ಜ್‌ಶೀಟಿನಲ್ಲೇನಿದೆ?

ಇಡೀ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಿದ್ದು, ಎಸ್​​ಐಟಿ ತನಿಖೆಯಲ್ಲಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡಲು ಈ ಬುರುಡೆ ಗ್ಯಾಂಗ್ ಕಥೆ ಕಟ್ಟಿದೆ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣದ ಚಾರ್ಜ್‌ಶೀಟ್‌ ಸಿದ್ಧವಾಗಿದ್ದು, ಚಾರ್ಜ್​ಶೀಟ್​ನಲ್ಲಿ ಸಿ.ಎನ್.ಚಿನ್ನಯ್ಯತಲೆಬುರುಡೆ ತಂದಿದ್ದು, ಅದನ್ನು ತಂದುಕೊಟ್ಟವರ ಬಗ್ಗೆ ಸಂಪೂರ್ಣ ವಿವರವನ್ನು ಉಲ್ಲೇಖಸಿಲಾಗಿದೆ.

ಧರ್ಮಸ್ಥಳ ಬುರುಡೆ ಗ್ಯಾಂಗ್‌ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧ:  ಚಾರ್ಜ್‌ಶೀಟಿನಲ್ಲೇನಿದೆ?
Dharmasthala Mass Burial Case
Kiran HV
| Edited By: |

Updated on: Nov 19, 2025 | 9:38 PM

Share

ಬೆಂಗಳೂರು/ ಮಂಗಳೂರು, (ನವೆಂಬರ್ 19): ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾರೆಂದು ಅಪಪ್ರಚಾರ ಪ್ರಕರಣದ (dharmasthala mass burial case) ಜಾರ್ಜ್​​ಶೀಟ್ (Chargesheet) ಸಿದ್ಧವಾಗಿದೆ. ಮಹೇಶ್ ತಿಮರೋಡಿ, ಚಿನ್ನಯ್ಯ , ಗಿರೀಶ್ ಮಟ್ಟಣ್ಣನವರ್‌, ಸುಜಾತ ಭಟ್, ವಿಠಲ್ ಗೌಡ ಸೇರಿ 6 ಮಂದಿಯ ವಿರುದ್ಧ ಒಟ್ಟು 4 ಸಾವಿರ ಪುಟಗಳ ಚಾರ್ಜ್ ಶೀಟ್ ಸಿದ್ಧವಾಗಿದ್ದು.ವಿಶೇಷ ತನಿಖಾ ತಂಡ (SIT) ಗುರುವಾರ ಚಾರ್ಜ್‌ಶೀಟ್‌ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್​​​ಗೆ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಚಿನ್ನಯ್ಯನನ್ನು ಬಂಧನ ಮಾಡಲಾಗಿದ್ದು ಉಳಿದವರ ವಿಚಾರಣೆ ನಡೆಸಲಾಗಿದೆ. ಷಡ್ಯಂತ್ರ ರೂಪಿಸಿ , ಅಪಪ್ರಚಾರ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಎಸ್ಐಟಿ ಮುಖ್ಯ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಟಿ.ಜಯಂತ್, ವಿಠ್ಠಲಗೌಡ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಿದ್ದಾರೆ. ಚಾರ್ಜ್​ಶೀಟ್​ನಲ್ಲಿ ತಲೆಬುರುಡೆ ತಂದಿದ್ದ ಸಿ.ಎನ್.ಚಿನ್ನಯ್ಯ, ಅದನ್ನು ತಂದುಕೊಟ್ಟವರ ಬಗ್ಗೆ ಸಂಪೂರ್ಣ ವಿವರ ಉಲ್ಲೇಖ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಮುಸ್ಲಿಮರಿಂದ ಪಾದಯಾತ್ರೆ

ಹಾಗೇ ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಪ್ರೇರಣೆ ಕೊಟ್ಟಿದ್ದು ಯಾರು? ಬುರುಡೆ ತಂದುಕೊಟ್ಟಿದ್ದು ಯಾರು? ಎಲ್ಲಿಂದ ಬುರುಡೆ ತಂದಿದ್ದರು? ಬುರುಡೆ ವಿಚಾರದಲ್ಲಿ ಏನೇನು ಷಡ್ಯಂತ್ರ ನಡೆದಿದೆ? ತಲೆಬುರುಡೆ ಎಲ್ಲೆಲ್ಲಿಗೆ ತೆಗೆದುಕೊಂಡು ಹೋಗಿದ್ದರು? ಬುರುಡೆ ಇಟ್ಕೊಂಡು ಏನೇನು ಷಡ್ಯಂತ್ರ ಮಾಡಿದ್ದಾರೆ ಎನ್ನುವ ಅಂಶವನ್ನು ಎಸ್​​ಐಟಿ ಅಧಿಕಾರಿಗಳು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಸ್ಕ್​ ಮ್ಯಾನ್ ಅಲಿಯಾಸ್ ಚಿನ್ನಯ್ಯ ತಾನು 100 ಕ್ಕೂ ಹೆಚ್ಚು ಶವಗಳನ್ನು ಹೂತಿರುವುದಾಗಿ ಹೇಳಿದ್ದ. ಈ ಕುರಿತು ಸಾಕಷ್ಟು ಕಾರ್ಯಾಚರಣೆಗಳೂ ನಡೆದಿತ್ತು. ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವೆಂದು ಆಕ್ರೋಶಗಳು ಸಹ ವ್ಯಕ್ತವಾಗಿದ್ದವು. ಇನ್ನು ಈ ಸಂಬಂಧ ಬುರುಡೆ ತಂದಿದ್ದ  ಚಿನ್ನಯ್ಯನನ್ನು ಎಸ್​​ಐಟಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿ ಬಳಿಕ ಅರೆಸ್ಟ್ ಮಾಡಿದ್ದರು.

ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಮುಫ್ತಿ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..