ಧರ್ಮಸ್ಥಳ ಕೇಸ್: ಶ್ರೀಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆ ಕೊಟ್ಟ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪ ಮಾಡಿದ್ದು, ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆಗಳು ನಡೆದಿದ್ದು, ಈ ಬಗ್ಗೆ ತನಿಖೆ ಮಾಡಬೇಕೆಂಬ ಮಾತುಗಳು ಕೇಳಿಬಂದಿವೆ. ಈ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ತನಿಖೆ ಮಾಡಿದರೂ ಯಾವುದೇ ಸೂಕ್ತ ಕುರುಹುಗಳು ದೊರೆತಿಲ್ಲ. ಹೀಗಾಗಿ ಇದೊಂದು ಬುರುಡೆ ಕಥೆ ಎಂದು ಸಾಬೀತಾಗಿದೆ. ಇದರ ಬೆನ್ನಲ್ಲೇ ಇದೀಗ ಈ ಪ್ರಕರನಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರದ ಭಕ್ತಾದಿಗಳಿಗೆ ಮಹತ್ವದ ಕರೆಯೊಂದನ್ನು ನೀಡಿದ್ದಾರೆ.

ಮಂಗಳೂರು (ಆಗಸ್ಟ್ 29): ಧರ್ಮಸ್ಥಳದ (Dharmasthala) ಬೆಳವಣಿಗೆಯಿಂದ ಪುರುಷರಿಗಿಂತ, ಮಹಿಳೆಯರೇ ಹೆಚ್ಚಾಗಿ ಕಣ್ಣೀರಿಟ್ಟಿದ್ದಾರೆ, ವೇದನೆ ಪಡುತ್ತಿದ್ದಾರೆ. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ ಹೋರಾಟಕ್ಕೆ, ಪ್ರತಿಭಟನೆಗೂ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಮಂಜುನಾಥ ಸ್ವಾಮಿಗೆ ಬಿಟ್ಟಿದ್ದೇವೆ. ಸತ್ಯ ಬಿಟ್ಟು ನಾನು ಯಾವತ್ತೂ ಹೋಗಿಲ್ಲ. ಹೋಗುವುದೂ ಇಲ್ಲ. ಎಲ್ಲರೂ ಶಾಂತತೆಯನ್ನು ಕಾಪಾಡಬೇಕು. ತಾಳ್ಮೆಯಿಂದ ಇರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Dr Veerendra heggade) ಮನವಿ ಮಾಡಿದ್ದಾರೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಇಂದು (ಆಗಸ್ಟ್ 29) ನಡೆದ ಜೈನ ಮುನಿಗಳ ಕಾರ್ಯಕ್ರಮ ನಡೆಸಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಜೈನ ಮಠಗಳ ಭಟ್ಟಾರಕರು ಪಾಲ್ಗೊಂಡಿದ್ದರು. ಅಲ್ಲದೇ ವಿವಿಧ ಜೈನ ಸಂಘ (Jains Union) ಸಂಸ್ಥೆಗಳಿಂದ ನೂರಾರು ಜನ ಭಾಗಿಯಾಗಿದ್ದರು. ಇದಕ್ಕೂ ಮುನ್ನ ಧರ್ಮಸ್ಥಳ ಪ್ರವೇಶದ್ವಾರದಿಂದ ದೇಗುಲದ ವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜೈನ ಸಮುದಾಯದ ಮುನಿಗಳು, ಜೈನ ಮಠಗಳ ಭಟ್ಟಾರಕರ ನೇತೃತ್ವದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ , ಇಂದು ಶ್ರೀ ಕ್ಷೇತ್ರಕ್ಕೆ ಬಹಳ ವಿಶೇಷವಾದ ಕಳೆ ಬಂದಿದೆ. ಇಷ್ಟೊಂದು ಆಶಯಧಾರಿಗಳು, ಆಶೀರ್ವಚನ ನೀಡುತ್ತಿರೋದು ತುಂಬಾ ದೊಡ್ಡದು. ಇಷ್ಟೊಂದು ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಬಂದಿರೋದು ಸಂತಸ ತಂದಿದೆ. ಇಂದು ಮೂಡಬಿದ್ರೆ ಭಟ್ಟಾರಕರ ಪಟ್ಟಾಭೀಷೇಕದ ದಿನ, ಅವರು ಕೂಡ ನಿಮ್ಮೊಂದಿಗಿದ್ದೇವೆ ಎಂಬ ಸಂದೇಶ ಕೊಟ್ಟಿದ್ದಾರೆ ಇದಕ್ಕಿಂತ ದೊಡ್ಡ ಮಾತು ನನಗೆ ಬೇಡ ಎಂದರು.
ಇದನ್ನೂ ಓದಿ: ಎಲ್ಲ ಕಾರ್ಮೋಡಗಳು ಕರಗಿ ಶಾಂತಿ-ನೆಮ್ಮದಿ ನೆಲೆಸಲಿ: ಧರ್ಮಸ್ಥಳದ ಬಗ್ಗೆ ಸುತ್ತೂರು ಶ್ರೀ ಬಹಿರಂಗ ಪತ್ರ
ಫಲ ಈಗ ಸಿಗುತ್ತಿದೆ ಎಂದ ವಿರೇಂದ್ರ ಹೆಗ್ಗಡೆ
ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಮಾತನಾಡಬಾರದು ಎಂಬ ಆದೇಶ ಆಗಿದೆ. ಆದ್ರೆ ಭಕ್ತರೊಬ್ಬರು ನನಗೆ ಹೇಳುತ್ತಿದ್ದರು, ಈ ಬೆಳವಣಿಗೆ ಆದಾಗಿನಿಂದ ಪುರುಷರಿಗಿಂತ ಮಹಿಳೆಯರು ಹೆಚ್ಚು ಕಣ್ಣೀರು ಹಾಕಿದ್ದಾರೆ. ವೇದನೆ ಪಡುತ್ತಿದ್ದಾರೆ. ನಮಗೆ ಹಾಗೂ ಕುಟುಂಬಕ್ಕೆ ನೆಮ್ಮದಿಯಿಲ್ಲ. ನೀವೇ ಏನಾದ್ರೂ ಮಾಡಿ ಅಂತ ಹೇಳಿಕೊಂಡಿದ್ರು. ಕೆಲ ಹೆಣ್ಣುಮಕ್ಕಳು ಯಾವುದೇ ರೀತಿಯ, ಹೋರಾಟಕ್ಕೆ, ಪ್ರತಿಭಟನೆಗೆ ತಯಾರಿದ್ದಾರೆ. ಆದ್ರೆ ಅಂತಹ ಹೋರಾಟ ಅಗತ್ಯವಿಲ್ಲ. ಎಲ್ಲವೂ ಸ್ವಾಮಿ ಮೇಲೆ ಬಿಟ್ಟದ್ದೇವೆ. ಅದರ ಫಲ ಈಗ ಸಿಗುತ್ತಿದೆ ಎಂದು ತಿಳಿಸಿದರು.
ಜನಿವಾರ ಧಾರಣೆ ಮಾಡುವುದು ಜಾತಿ ವೇಷಕ್ಕಲ್ಲ
ಸತ್ಯಕ್ಕೆ ಎರಡು ಮುಖ ಇಲ್ಲ. ಒಂದೇ ಮುಖ. ವ್ಯಕ್ತಿ ಯಾವುದೇ ಧರ್ಮವಾಗಲಿ, ಆ ಧರ್ಮಕ್ಕೆ ಶರಣಾಗಬೇಕು. ಇಲ್ಲದಿದ್ದರೆ ಅವರು ಅನುಯಾಯಿಗಳೇ ಅಲ್ಲ. ಇಷ್ಟೊಂದು ಜನ ಶ್ರೀಗಳು ನಮಗೆ ಧೈರ್ಯ ಕೊಟ್ಟಿದ್ದಾರೆ. ಎಲ್ಲರ ಮೇಲೂ ಮಂಜುನಾಥನ ಆಶೀರ್ವಾದ ಇರಲಿ. ಜನಿವಾರ ಜಾತಿ ವೇಷಕ್ಕಲ್ಲ, ಮೂರು ಧರ್ಮಗಳ ಆಚರಿಸುವುದಕ್ಕಾಗಿ ಜನಿವಾರ ಧಾರಣೆ ಮಾಡುತ್ತೇವೆ. ಅದೇ ರೀತಿ ದಶಲಕ್ಷಣ ಇರುವುದು ಪೂಜೆಗಲ್,ಲ ಪ್ರಾರ್ಥನೆ ಮಾಡವುದಕ್ಕೆ ಎಂದು ಹೇಳಿದರು.
ಸನ್ನೆ ಕೊಟ್ಟರೆ ಸಾಕು ಸಾವಿರಾರು ಜನ ಸೇರುತ್ತಾರೆ
ನಾವು ಮಾಡುವ ಪ್ರಯತ್ನಗಳಿಗೆ ಸ್ವಾಮಿಯ ಅನುಗ್ರಹ ಇದ್ದೇ ಇದೆ. ನಾವು ಸತ್ಯ ಬಿಟ್ಟು ಹಿಂದೆ ಹೋಗಿಲ್ಲ, ಮುಂದೆಯೂ ಹೋಗಲ್ಲ. ಆದ್ದರಿಂದ ಭಕ್ತರು ತಾಳ್ಮೆಯಿಂದಿರಬೇಕು, ಶಾಂತಿ ಕಾಪಾಡಬೇಕು. ಎಲ್ಲರೂ ಕೂಡ ದಶ ಧರ್ಮಗಳನ್ನು ಪಾಲಿಸಲೇಬೇಕು. ಪೂಜ್ಯರು ಬಂದಿರುವುದು ವಿಶ್ವಾಸ ಮಾಡಿದೆ ತಮಿಳುನಾಡಿನಿಂದ ಸ್ವಾಮೀಜಿಗಳು ಬಂದಿದ್ದಾರೆ. ಅವರು ಸನ್ನೆ ಕೊಟ್ಟರೆ ಸಾಕು ಸಾವಿರಾರು ಜನ ಸೇರುತ್ತಾರೆ. ಆದ್ರೆ, ಸಂಯಮ ಅತ್ಯಂತ ಶ್ರೇಷ್ಠವಾದದ್ದು ಎಂದು ಹೇಳಿ ಎಲ್ಲರಿಗೂ ನನ್ನ ಧನ್ಯವಾದ ತಿಳಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



