‘ಗಾಳಿ ಸುದ್ದಿ ನಂಬಬೇಡಿ’; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಎದುರಾಗಿದ್ದು, ಆರೋಪಿ ಚಿನ್ನಯ್ಯ ಹೈಕೋರ್ಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ್ದಾನೆ. ಕೆಲವರು ಧರ್ಮಸ್ಥಳ ವಿರುದ್ಧ ಷಡ್ಯಂತ್ರ ರೂಪಿಸಲು ತನ್ನನ್ನು ಬಳಸಿಕೊಂಡಿದ್ದಾರೆ ಎಂದು ಚಿನ್ನಯ್ಯ ಆರೋಪಿಸಿದ್ದಾನೆ. ಈ ಕುರಿತು ಮಾಧ್ಯಮಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ, ಪ್ರಕಾಶ್ ರಾಜ್ ಈ ಆರೋಪಗಳನ್ನು ಸುಳ್ಳು ಎಂದು ಖಂಡಿಸಿ, ಶೀಘ್ರದಲ್ಲೇ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.

‘ಗಾಳಿ ಸುದ್ದಿ ನಂಬಬೇಡಿ’; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ
ಪ್ರಕಾಶ್ ರಾಜ್

Updated on: Jun 12, 2026 | 9:58 AM

ಬೆಂಗಳೂರು, ಜೂನ್, 12: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು (Prakash Raj) ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ಕಿಡಿಕಾರಿದ್ದಾರೆ.

ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್:

‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ಆರಂಭಿಸಿದ್ದಾರೆ.

ಪ್ರಕಾಶ್ ರಾಜ್​ ಸ್ಪಷ್ಟನೆ ಕೊಟ್ಟ ಟ್ವೀಟ್


‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಉಲ್ಲೇಖಿಸಿದ ಚಿನ್ನಯ್ಯ!

ಪ್ರಕರಣದ ಹಿನ್ನೆಲೆ:

ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ತಾವು ಹೇಳಿದಂತೆ ನಡೆದುಕೊಳ್ಳದೆ ಇದ್ದರೆ ಕೊಲೆ ಮಾಡುವ ಬೆದರಿಕೆ ಕೂಡ ಇತ್ತು ಎಂದು ಆತ ಆರೋಪಿಸಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:49 am, Fri, 12 June 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us