ಮುಸ್ಲಿಂರ ಮೀಸಲಾತಿ ರದ್ದು ವಿಚಾರ: ಯತ್ನಾಳ್, ಬೆಲ್ಲದ್ ಹೇಳಿಕೆಗೆ ಮುಸ್ಲಿಂ ಮುಖಂಡರಿಂದ ಖಂಡನೆ

ಮುಸ್ಲಿಂರ ಮೀಸಲಾತಿ ಬಗ್ಗೆ ಚಕಾರ ಎತ್ತಿ ರದ್ದುಗೊಳಿಸಬೇಕು ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕರಾದ ಯತ್ನಾಳ್ ಮತ್ತು ಬೆಲ್ಲದ್ ಅವರನ್ನು ಮುಸ್ಲಿಂ ಮುಖಂಡರು ಟೀಕಿಸಿದ್ದಾರೆ.

ಮುಸ್ಲಿಂರ ಮೀಸಲಾತಿ ರದ್ದು ವಿಚಾರ: ಯತ್ನಾಳ್, ಬೆಲ್ಲದ್ ಹೇಳಿಕೆಗೆ ಮುಸ್ಲಿಂ ಮುಖಂಡರಿಂದ ಖಂಡನೆ
ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ್ ಬೆಲ್ಲದ್
Follow us
TV9 Web
| Updated By: Rakesh Nayak Manchi

Updated on:Nov 03, 2022 | 4:12 PM

ಧಾರವಾಡ: ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದತಿ ಬಗ್ಗೆ ಜನಪ್ರತಿನಿಧಿಗಳು ಹೇಳಿಕೆ ನೀಡುತ್ತಿದ್ದಾರೆ. ಓಬಿಸಿ ಕೋಟಾದಿಂದ ಮುಸ್ಲಿಂರನ್ನು ತೆಗದುಹಾಕುವಂತೆ ಹೇಳಿಕೆ ವಿಚಾರ ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಧಾರವಾಡದ ಮುಸ್ಲಿಂ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅಂಜುಮನ್ ಇಸ್ಲಾಂ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ನಾವು ಬೆಂಬಲಿಸುತ್ತೇವೆ. ಅವರು ಮೀಸಲಾತಿ ತೆಗೆದುಕೊಳ್ಳಲಿ, ಈ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಆದರೆ ಬೆಲ್ಲದ್ ಮತ್ತು ಯತ್ನಾಳ್ ಮುಸ್ಲಿಂರ ಓಬಿಸಿ ಬಗ್ಗೆ ಮಾತನಾಡಿದ್ದಾರೆ. ಇದು ಸರಿಯಲ್ಲ. ಅವರ ಹೇಳಿಕೆಗಳನ್ನು ಖಂಡಿಸುತ್ತೇವೆ ಎಂದರು.

ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಯತ್ನಾಳ್ ಹೇಳಿದ್ದೇನು?

ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2ರಿಂದ 3ರಷ್ಟಿದ್ದಾರೆ. ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯ ಅಂದರೆ ಬ್ರಾಹ್ಮಣರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರು ಅಲ್ಲವೇ ಅಲ್ಲ. ಒಂದು ಜನಾಂಗದಷ್ಟಿರುವ ಮುಸ್ಲಿಮರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ದೇಶದ್ರೋಹಿ ಕೆಲಸ ಮತ್ತು ಪಾಕಿಸ್ತಾನದ ಪರ ಅವರು ಮಾತನಾಡುತ್ತಾರೆ. ಅಂಥವರಿಗೆ ಮೀಸಲಾತಿ ಬೇಕು ಅಂದರೆ ಹೇಗೆ? ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದರು. ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರಡುವ ಮೀಸಲಾತಿ ಲಾಭವನ್ನು ಮುಸ್ಲೀಂ ಸಮುದಾಯದವರು ಪಡೆಯುತ್ತಿದ್ದಾರೆ. 2ಎ ಮೀಸಲಾತಿಯಿಂದ ತೆಗೆದುಹಾಕಲು ಎಲ್ಲ ತಯಾರಿ ನಡೆದಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಯುತ್ತಿವೆ ಎಂದಿದ್ದರು. ಈ ವಿಚಾರವಾಗಿ ಶಾಸಕ ಅರವಿಂದ ಬೆಲ್ಲದ್ ನೀಡಿದ ಹೇಳಿಕೆಯನ್ನೂ ಯತ್ನಾಳ್ ಬೆಂಬಲಿಸಿದ್ದರು.

ಅರವಿಂದ ಬೆಲ್ಲದ್ ನೀಡಿದ ಹೇಳಿಕೆ ಏನು?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸಿದ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತಾ ಟಿವಿ9 ಜೊತೆ ಮಾತನಾಡಿದ್ದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಹಿಂದಿನ ಕಾಂಗ್ರೆಸ್ ಸರ್ಕಾರ ಧರ್ಮಾಧಾರಿತ (religion-based) ಮೀಸಲಾತಿಯನ್ನು ಜಾರಿಗೆ ತಂದ ಕಾರಣ ಮುಸಲ್ಮಾನರು 2ಎ ಮತ್ತು 2ಬಿ-ಎರಡೂ ಕೆಟೆಗಿರಿಗಳಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ. ಅದನ್ನು ರದ್ದು ಮಾಡಿ ಬಹಳ ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕೆಂದು ಹೇಳಿದ್ದರು.

ಬಿಜೆಪಿಯ ಯತ್ನಾಳ್ ಮತ್ತು ಕಾಂಗ್ರೆಸ್​ನ ಕಾಶಪ್ಪನವರ ವಿರುದ್ಧ ಪ್ರತಿಭಟನೆ

ಬಣಜಿಗ ಸಮುದಾಯದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವ ಆರೋಪ ಸಂಬಂಧ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ ವಿರುದ್ದ ಬಣಜಿಗ ಸಮುದಾಯದ ಮಂದಿ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಎದುರು ಪ್ರತಿಭಟನಾ ಸಭೆ ನಡೆಸಲಾಗಿದ್ದು, ಗುಂಡಾಗಿರಿಯಿಂದ ಮಾತನಾಡುವ ಯತ್ನಾಳಗೆ ಧಿಕ್ಕಾರ, ಜಾತಿ ನಿಂದನೆ ಮಾಡಿದವರಿಗೆ ಧಿಕ್ಕಾರ, ಸಮಾಜದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುವ ಕಾಶಪ್ಪನವರಿಗೆ ಧಿಕ್ಕಾರ, ಲಿಂಗಾಯತ ಸಮಾಜವನ್ನು ಒಡೆಯುವ ಕಾಶಪ್ಪನವರಿಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.

ಅಲ್ಲದೆ, ಯತ್ನಾಳ್ ಹಾಗೂ ಕಾಶಪ್ಪನವರ ಭಾವಚಿತ್ರಕ್ಕೆ ಕಪ್ಪು‌ ಪಟ್ಟಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬಣಜಿಗ ಸಮಾಜದ ಮುಖಂಡರು ಮನವಿ ಸಲ್ಲಿಸಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Thu, 3 November 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ