ಧಾರವಾಡ: ಕಾಂಗ್ರೆಸ್ ಮುಖಂಡನ ಜನ್ಮದಿನಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ ಮತ್ತೊಬ್ಬ ಕೈ ಮುಖಂಡ
‘ಕೈ’ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆಯಲ್ಲಿದ್ದರು. ಈ ಸಂದರ್ಭದಲ್ಲಿ ಕಾಂಗ್ರಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಶುಭಾಶಯ ತಿಳಿಸಿದ್ದಾರೆ.
ಧಾರವಾಡ: ಕಾಂಗ್ರೆಸ್ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ ಸಖತ್ ಪಾರ್ಟಿ ಏರ್ಪಡಿಸಲಾಗಿತ್ತು. ಈ ವೇಳೆ ಸರ್ಪರೈಸ್ ಆಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಗಾಳಿಯಲ್ಲಿ ಗುಂಡು ಹಾರಿಸಿ ಅಣ್ಣಪ್ಪಗೌಡಗೆ ಹುಟ್ಟಿದ ದಿನದ ಶುಭಾಶಯ ತಿಳಿಸಿರುವ ಘಟನೆ ನಡೆದಿದೆ.
ಶಿವಳ್ಳಿ ಗ್ರಾಮದ ತೋಟದಲ್ಲಿ ಅಣ್ಣಪ್ಪಗೌಡ ಚಿನ್ನಗುಡಿ ಜನ್ಮದಿನವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಗಾಳಿಯಲ್ಲಿ ಗುಂಟು ಹಾರಿಸಿ, ರಿವಾಲ್ವರ್ ತೋರಿಸುವ ಮೂಲಕ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ
ಮಂಗಳೂರಿನಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು