AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ, ಎಐಸಿಸಿ ಸದಸ್ಯನಿಗೆ ಧಾರವಾಡ ಡಿಸಿ ನೋಟಿಸ್

ಎಐಸಿಸಿ ಸದಸ್ಯ ಮತ್ತು ಪಾಲಿಕೆ ಮಾಜಿ ಸದಸ್ಯ ದೀಪಕ್ ಚಿಂಚೋರೆಗೆ ಧಾರವಾಡ ಡಿಸಿ ನಿತೇಶ ಪಾಟೀಲ್ ಷೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಇಲ್ಲ. ಡಿಸಿ ಬರೀ ಮಾಧ್ಯಮಗಳ ಮುಂದೆ ಫೋಸ್ ಕೊಡುತ್ತಾರೆ. ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ ಇಲ್ಲ ಎಂದು ದೀಪಕ್ ವೀಡಿಯೋ ಮಾಡಿ ಡಿಸಿ ವಿರುದ್ಧ ಹರಿಹಾಯ್ದಿದ್ದರು.

ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ, ಎಐಸಿಸಿ ಸದಸ್ಯನಿಗೆ ಧಾರವಾಡ ಡಿಸಿ ನೋಟಿಸ್
ಧಾರವಾಡ ಡಿಸಿ ನಿತೇಶ ಪಾಟೀಲ್
ಆಯೇಷಾ ಬಾನು
ಆಯೇಷಾ ಬಾನು|

Updated on: Apr 29, 2021 | 10:47 AM

Share

ಧಾರವಾಡ: ಜಿಲ್ಲೆಯ ಜನರಿಗೆ ತಪ್ಪು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ದೀಪಕ್‌ಗೆ ಧಾರವಾಡ ಡಿಸಿ ನೋಟಿಸ್ ಜಾರಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಆಕ್ಸಿಜನ್, ಬೆಡ್, ವೆಂಟಿಲೇಟ್, ICU ಬೆಡ್ ಇಲ್ಲವೆಂದು ದೀಪಕ್ ವಿಡಿಯೋ ಮಾಡಿದ್ದರು. ಆದರೆ ಧಾರವಾಡ ಜಿಲ್ಲೆಯಲ್ಲಿ 80 ಐಸಿಯು ಬೆಡ್, 103 ವೆಂಟಿಲೇಟರ್, 545 ಆಕ್ಸಿಜನ್ ಬೆಡ್ ಖಾಲಿ ಇವೆ. ಹೀಗಾಗಿ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದೀಪಕ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಎಐಸಿಸಿ ಸದಸ್ಯ ಮತ್ತು ಪಾಲಿಕೆ ಮಾಜಿ ಸದಸ್ಯ ದೀಪಕ್ ಚಿಂಚೋರೆಗೆ ಧಾರವಾಡ ಡಿಸಿ ನಿತೇಶ ಪಾಟೀಲ್ ಷೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಇಲ್ಲ. ಡಿಸಿ ಬರೀ ಮಾಧ್ಯಮಗಳ ಮುಂದೆ ಫೋಸ್ ಕೊಡುತ್ತಾರೆ. ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್, ವೆಂಟಿಲೇಟರ್ ಇಲ್ಲ ಎಂದು ದೀಪಕ್ ವೀಡಿಯೋ ಮಾಡಿ ಡಿಸಿ ವಿರುದ್ಧ ಹರಿಹಾಯ್ದಿದ್ದರು. ಮಾಧ್ಯಮಗಳಲ್ಲಿ ವಿಡಿಯೋ ರಿಲೀಸ್ ಮಾಡಿದ್ದರು. ದೀಪಕ್ ಮಾಡಿದ ವಿಡಿಯೋ ನೋಡಿ ಡಿಸಿ ಗರಂ ಆಗಿದ್ದಾರೆ.

ಜಿಲ್ಲೆಯಲ್ಲಿ 80 ಐಸಿಯು ಬೆಡ್, 103 ವೆಂಟಿಲೇಟರ್, 545 ಆಕ್ಸಿಜನ್ ಬೆಡ್ ಖಾಲಿ ಇವೆ. ಆದರೂ ಜನರಿಗೆ ತಪ್ಪು ಮಾಹಿತಿ ನೀಡಿದ್ದೀರಿ. ಆ ಮೂಲಕ ಜನರನ್ನು ಆತಂಕಪಡಿಸಿದ್ದೀರಿ. ಈ ಹಿನ್ನೆಲೆಯಲ್ಲಿ ನಿಮ್ಮ ವಿವರಣೆಯನ್ನು ನೀಡಿ ಅಂತಾ ಕೊವಿಡ್-19 ನಿಯಂತ್ರಣ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿದ್ದಾರೆ. 24 ಗಂಟೆಯೊಳಗೆ ಖುದ್ದಾಗಿ ಹಾಜರಾಗಿ ವಿವರಣೆ ನೀಡುವಂತೆ ದೀಪಕ್ ಚಿಂಚೋರೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಕರ್ಫ್ಯೂ ಹಿನ್ನೆಲೆ ಅಂಗಡಿ ಬಂದ್; ನಡುಬೀದಿಯಲ್ಲೇ ಗುಟ್ಕಾಕ್ಕಾಗಿ ಗುದ್ದಾಡಿದ ಮಂದಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!