ಧಾರವಾಡ: ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿದ್ದ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ್ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್ Channakeshava Tingrikar ಸಾಕ್ಷ್ಯ ನಾಶದ ಆರೋಪ ಎದುರಿಸುತ್ತಿದ್ದಾರೆ. ಈ ಮೊದಲು ಸಿಬಿಐ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಧಾರವಾಡ ಹೈಕೋರ್ಟ್ ಪೀಠ ಎರಡೂ ಕಡೆ ವಕೀಲರ ವಾದ ಆಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.
Published On - 5:03 pm, Mon, 30 November 20