ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ

ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ ಅವಕಾಶ ಇಲ್ಲ. ಮತದಾನಕ್ಕೆ ಅವಕಾಶಕ್ಕೆ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ
ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:May 06, 2024 | 8:45 PM

ಧಾರವಾಡ, ಮೇ 06: ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ (Vinay Kulkarni) ಅವಕಾಶ ಇಲ್ಲ. ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಆ ಪ್ರಕರಣದಿಂದ ಹೊರಗೆ ಬರಲು ವಿನಯ ಎಷ್ಟೇ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗುತ್ತಲೆ ಇಲ್ಲ.

ಇದನ್ನೂ ಓದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

2016 ರ ಜೂನ್ 15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್​ನಲ್ಲಿ ನಡೆದಿದ್ದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್​ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ; ಸಂತ್ರಸ್ತೆಯರ ಬಗ್ಗೆ ಯಾರೂ ಮಾತಾಡುತ್ತಿಲ್ಲ, ಅವರ ಭವಿಷ್ಯವೇನು? ವಿನಯ್ ಕುಲಕರ್ಣಿ

ಅದರ ತೀರ್ಪನ್ನು ಸೋಮವಾರ ಪ್ರಕಟಿಸಲಾಗಿತ್ತು. ಅದರಲ್ಲಿ ವಿನಯ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು. ಇದರಿಂದಾಗಿ ವಿನಯ ಕುಲಕರ್ಣಿಗೆ ದೊಡ್ಡ ಶಾಕ್ ಎದುರಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:36 pm, Mon, 6 May 24