ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ; ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ

|

Updated on: May 30, 2021 | 3:07 PM

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್ ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದುಕೊಂಡಷ್ಟು ಪ್ರಮಾಣದಲ್ಲಿ ಸಂಖ್ಯೆ ಕಡಿಮೆಯಾಗಲೇ ಇಲ್ಲ. ಇದರಿಂದಾಗಿ ಲಾಕ್​ಡೌನ್ ಮತ್ತಷ್ಟು ಕಠಿಣಗೊಳಿಸಿ ಆದೇಶ ಮಾಡಲಾಯಿತು. ಆದರೆ ಈ ಮೂರು ದಿನಗಳ ಅವಧಿಯಲ್ಲಿ ದಿನಕ್ಕೆ ಆರು ಗಂಟೆಗಳ ಅವಕಾಶ ನೀಡಿದ್ದರಿಂದ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ ಎನ್ನುವ ಆತಂಕ ಶುರುವಾಗಿದೆ.

ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ; ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ
ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ
Follow us on

ಧಾರವಾಡ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಕೊವಿಡ್ ಸೋಂಕಿನ ಪರಿಣಾಮ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್​ಡೌನ್ ಮತ್ತೆ ಮುಂದುವರೆಯುತ್ತಾ? ಅಥವಾ ಜೂನ್ 7 ಕ್ಕೆ ಕೊನೆಗೊಳ್ಳುತ್ತಾ ಎನ್ನುವ ಗೊಂದಲ ಶುರುವಾಗಿದೆ. ಈ ಮಧ್ಯೆ ಧಾರವಾಡದಲ್ಲಿ ಜಿಲ್ಲಾಡಳಿತ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಲಾಕ್​ಡೌನ್ ಅನ್ನು ಮತ್ತಷ್ಟು ಬಿಗಿಗೊಳಿಸಿತು. ಆದರೆ ಇದೀಗ ಮೂರು ದಿನಗಳ ಕಾಲ ಲಾಕ್​ಡೌನ್ ಸಡಿಲಿಕೆ ಮಾಡಿದೆ. ಹೀಗಾಗಿ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಜನರಿಂದ ಅಸಮಾಧನದ ಕೂಗು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಇದೇ ನಿರ್ಧಾರ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳ ಆಗುವುದಕ್ಕೆ ಕಾರಣವಾಗುತ್ತದೆ ಎನ್ನುವ ಆತಂಕ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಇದೀಗ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು, ದಿನಸಿ ಅಂಗಡಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ಇನ್ನು ಕೊರೊನಾ ಸಂಬಂಧಿಸಿದ ಲಾಕ್​ಡೌನ್ ಬಗ್ಗೆ ಹೆಚ್ಚಿನ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರಕಾರ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲೆಯಲ್ಲಿ ಮೊದಲಿಗೆ ವೀಕೆಂಡ್ ಲಾಕ್​ಡೌನ್ ಘೋಷಿಸಿದರು. ಬೆಳಿಗ್ಗೆ 6 ರಿಂದ 8 ರವರೆಗೆ ಹಾಲು, ತರಕಾರಿ ಖರೀದಿಗಷ್ಟೇ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಇದನ್ನೇ ಮುಂದುವರೆಸಿಕೊಂಡು ಹೋಗಲಾಯಿತು.

ಜಿಲ್ಲಾಡಳಿತದ ಈ ನಿರ್ಧಾರದಿಂದ ಒಂದು ವರ್ಗದ ಜನರಿಗೆ ಅಸಮಾಧಾನವುಂಟಾದರೂ ಜಿಲ್ಲೆಯಲ್ಲಿ ನಿತ್ಯವೂ ಬರುತ್ತಿದ್ದ ಕೊರೊನಾ ಸೋಂಕಿತ ಪ್ರಕರಣಗಳನ್ನು ನೋಡಿದರೆ, ಈ ನಿರ್ಧಾರ ಅನಿವಾರ್ಯವಿತ್ತು ಎಂದೆನಿಸಿತ್ತು. ಆದರೆ ಧಾರವಾಡದಲ್ಲಿ ಮೇ 27, 28 ಮತ್ತು 29 ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಹಾಲು, ತರಕಾರಿ, ಮಾಂಸ, ದಿನಸಿ ಖರೀದಿಗೆ ಜನರು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಶುರುವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್ ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದುಕೊಂಡಷ್ಟು ಪ್ರಮಾಣದಲ್ಲಿ ಸಂಖ್ಯೆ ಕಡಿಮೆಯಾಗಲೇ ಇಲ್ಲ. ಇದರಿಂದಾಗಿ ಲಾಕ್​ಡೌನ್ ಮತ್ತಷ್ಟು ಕಠಿಣಗೊಳಿಸಿ ಆದೇಶ ಮಾಡಲಾಯಿತು. ಆದರೆ ಈ ಮೂರು ದಿನಗಳ ಅವಧಿಯಲ್ಲಿ ದಿನಕ್ಕೆ ಆರು ಗಂಟೆಗಳ ಅವಕಾಶ ನೀಡಿದ್ದರಿಂದ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ ಎನ್ನುವ ಆತಂಕ ಶುರುವಾಗಿದೆ. ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕೇಳಿದರೆ, ಕೆಲವು ವೇಳೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸುವುದು ಅನಿವಾರ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಇಂಥ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ನಿತ್ಯವೂ ಜಿಲ್ಲೆಯಲ್ಲಿ 700 ರಿಂದ 1000 ವರೆಗೆ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ನಿರ್ಧಾರ ತೆಗೆದುಕೊಳ್ಳದಿದ್ದರೆ, ಮತ್ತಷ್ಟು ಸಮಸ್ಯೆಯಾಗುವುದು ಮಾತ್ರ ಸತ್ಯ ಎನ್ನುವುದು ಇಲ್ಲಿನ ಸ್ಥಳೀಯರ ಮಾತಾಗಿದೆ.

ಇದನ್ನೂ ಓದಿ:

ಕೊರೊನಾ ಲಾಕ್​ಡೌನ್ ವೇಳೆ ಓಡಾಡುವವರು ಆಧಾರ್​ ತೋರಿಸಬೇಕು, ಮಾಸ್ಕ್​ ಧರಿಸದವರು ಸೂಪರ್​ ಸ್ಪ್ರೆಡರ್ಸ್​: ಬಾಂಬೆ ಹೈಕೋರ್ಟ್​

ಕಲಬುರಗಿಯಲ್ಲೂ ಮೌಢ್ಯಾಚರಣೆ; ಕೊರೊನಾವನ್ನು ದೂರ ಮಾಡು ಎಂದು ದೇವರ ಮೊರೆ ಹೋದ ಗ್ರಾಮಸ್ಥರು