ಕೆರೆ ಬಚಾವೋ; ಧಾರವಾಡದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರಿಂದ ಹೋರಾಟ

ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಸೇರಿ ಈ ಅಂತರ ಗಂಗೆಯನ್ನು ನಿರ್ಮೂಲನೆಗೊಳಿಸಲು ಕೆರೆಯಲ್ಲಿನ ನೀರನ್ನು ಖಾಲಿ ಮಾಡಲು ನಿರ್ಧರಿಸಿ, ಕೆರೆಯ ಒಡ್ಡನ್ನು ಜೆಸಿಬಿ ಮೂಲಕ ಕಿತ್ತು ಹಾಕಿ, ನೀರನ್ನು ಹೊರಗೆ ಬಿಟ್ಟಿದ್ದರು. ಇದು ಅವೈಜ್ಞಾನಿಕ ಕ್ರಮ ಎಂದು ಪರಿಸರವಾದಿಗಳು ವಾದ ಮಾಡಿದರೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಇದೀಗ ವಿವಿಧ ಸಂಘಟನೆಗಳು ಹೋರಾಟಕ್ಕೆ ಇಳಿದಿವೆ.

ಕೆರೆ ಬಚಾವೋ; ಧಾರವಾಡದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರಿಂದ ಹೋರಾಟ
ಸೋಮೇಶ್ವರ ಕೆರೆ
Follow us
preethi shettigar
| Updated By: ಆಯೇಷಾ ಬಾನು

Updated on: Apr 10, 2021 | 7:22 AM

ಧಾರವಾಡ: ಜಿಲ್ಲೆಯ ಐತಿಹಾಸಿಕ ಕೆರೆಯೊಂದರಲ್ಲಿ ಬೆಳೆದಿದ್ದ ಅಂತರ ಗಂಗೆ ಸಸ್ಯವನ್ನು ತೆಗೆಯಲು ಅಧಿಕಾರಿಗಳು ಮುಂದಾಗಿದ್ದು, ಮಾಡಿದ ಅವೈಜ್ಞಾನಿಕ ಕ್ರಮವನ್ನು ಸಮರ್ಥಿಸಿಕೊಂಡಿದ್ದಲ್ಲದೇ ತಮ್ಮ ಕೆಲಸವನ್ನು ಮುಂದುವರೆಸಿರುವುದು ವಿವಿಧ ಪ್ರಗತಿಪರ ಸಂಘಟನೆಗಳ ಕಂಗೆಣ್ಣಿಗೆ ಗುರಿಯಾಗಿತ್ತು. ಇದೀಗ ಅಧಿಕಾರಿಗಳು ತಮ್ಮ ತಪ್ಪನ್ನು ಅರಿತು ಸರಿಯಾಗಿ ಕೆಲಸವನ್ನು ಮಾಡದೇ ಇರುವ ಹಿನ್ನೆಲೆಯಲ್ಲಿ ಇದೀಗ ಸಂಘಟನೆಗಳು ಕರೆಯನ್ನು ಉಳಿಸುವ ಹೋರಾಟವನ್ನು ಆರಂಭಿಸಿವೆ.

ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿರುವ ಐತಿಹಾಸಿಕ ಸೋಮೇಶ್ವರ ಕೆರೆ. ಸುಮಾರು 17 ಎಕರೆ ಪ್ರದೇಶವನ್ನು ವ್ಯಾಪಿಸಿಕೊಂಡಿದೆ. ಈ ಕೆರೆಯಲ್ಲಿ ಇತ್ತೀಚಿಗೆ ಅಂತರ ಗಂಗೆ ಸಸ್ಯ ಬೆಳೆದಿತ್ತು. ಈ ಸಸ್ಯವನ್ನು ನಿರ್ಮೂಲನೆ ಮಾಡಲು ಹಾಗೂ ಕೆರೆಯನ್ನು ಅಭಿವೃದ್ಧಿಪಡಿಸಲು 88 ಲಕ್ಷ ರೂಪಾಯಿ ಯೋಜನೆಯನ್ನು ಸಣ್ಣ ನೀರಾವರಿ ಇಲಾಖೆ ರೂಪಿಸಿತ್ತು. ಕೆರೆಗೆ ಸುಮಾರು 800 ಮೀಟರ್ ಕಾಂಕ್ರೀಟ್ ಗೋಡೆಯನ್ನು ಹಾಕುವುದು ಕೂಡ ಇದೇ ಯೋಜನೆಯಲ್ಲಿ ಸೇರಿದೆ.

ಆದರೆ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಸೇರಿ ಈ ಅಂತರ ಗಂಗೆಯನ್ನು ನಿರ್ಮೂಲನೆಗೊಳಿಸಲು ಕೆರೆಯಲ್ಲಿನ ನೀರನ್ನು ಖಾಲಿ ಮಾಡಲು ನಿರ್ಧರಿಸಿ, ಕೆರೆಯ ಒಡ್ಡನ್ನು ಜೆಸಿಬಿ ಮೂಲಕ ಕಿತ್ತು ಹಾಕಿ, ನೀರನ್ನು ಹೊರಗೆ ಬಿಟ್ಟಿದ್ದರು. ಇದು ಅವೈಜ್ಞಾನಿಕ ಕ್ರಮ ಎಂದು ಪರಿಸರವಾದಿಗಳು ವಾದ ಮಾಡಿದರೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಇದೀಗ ವಿವಿಧ ಸಂಘಟನೆಗಳು ಹೋರಾಟಕ್ಕೆ ಇಳಿದಿವೆ. ಇಂದು ಕೆರೆಯ ಬಳಿ ಆಗಮಿಸಿದ ಸಂಘಟನೆಗಳ ಕಾರ್ಯಕರ್ತರು, ಮೊದಲಿಗೆ ಕೆರೆಗೆ ವಿಶೇಷ ಪೂಜೆ ಮಾಡಿದರು.

lake protest

ಧಾರವಾಡದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರಿಂದ ಹೋರಾಟ

ಸಾಂಪ್ರದಾಯಿಕವಾಗಿ ಕೆರೆಯ ಪೂಜೆಯ ನಂತರ ಅಧಿಕಾರಿಗಳು ಹಾಗೂ ಗುತ್ತಿಗೆದಾರನಿಗೆ ದೇವರು ಸಮೃದ್ಧಿ ನೀಡಲಿ ಎಂದು ಮತ್ತೊಂದು ಪೂಜೆ ನೆರವೇರಿಸಲಾಯಿತು. ಏಕೆಂದರೆ ಕೆರೆಯನ್ನು ಅಭಿವೃದ್ಧಿಪಡಿಸುವುದು ಅಂದರೆ ಕೆರೆಯಲ್ಲಿನ ನೀರನ್ನು ಖಾಲಿ ಮಾಡುವುದು ಅಲ್ಲ ಎನ್ನುವ ಬುದ್ಧಿಯನ್ನು ದೇವರು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರನಿಗೆ ನೀಡಲಿ ಎನ್ನುವುದು ಈ ಪೂಜೆಯ ಹಿಂದಿನ ಉದ್ದೇಶವಾಗಿತ್ತು ಎಂದು ಹೋರಾಟಗಾರ ಲಕ್ಷ್ಮಣ ದೊಡ್ಡಮನಿ ಹೇಳಿದ್ದಾರೆ.

ಪೂಜೆಯ ಬಳಿಕ ಸೋಮೇಶ್ವರ ದೇವಸ್ಥಾನದವರೆಗೆ ಪ್ರತಿಭಟನಾಕಾರರು ಪಾದಯಾತ್ರೆಯನ್ನು ನಡೆಸಿದರು. ಈ ವೇಳೆ ಈ ಕೆಲಸಕ್ಕೆ ಸಂಬಂಧಿಸಿದವರ ವಿರುದ್ಧ ಘೋಷಣೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ಅಂತರ ಗಂಗೆಯನ್ನು ನಿರ್ಮೂಲನೆಗೊಳಿಸಲು ಅನೇಕ ಹೊಸ ಪದ್ಧತಿಗಳಿವೆ. ಅವುಗಳನ್ನು ಬಳಸಿಕೊಂಡೇ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಅಂತರಗಂಗೆಯನ್ನು ನಿರ್ಮೂಲನೆಗೊಳಿಸಲಾಗುತ್ತಿದೆ. ಆದರೆ ಅದನ್ನು ಬಿಟ್ಟು ಈ ರೀತಿ ನೀರು ಖಾಲಿ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಹೋರಾಟಗಾರರಾದ ಸುಧೀರ್ ಹೇಳಿದ್ದಾರೆ.

ಮೊದಲೇ ಎಲ್ಲಾ ಕಡೆಗಳಲ್ಲಿ ಅಂತರ್ಜಲ ಕಡಿಮೆಯಾಗಿದೆ. ಅಂತಹದರಲ್ಲಿ ನೀರು ತುಂಬಿರುವ ಕೆರೆಗಳು ಜನರ ಜೀವನಾಡಿಯಂತೆ ಕೆಲಸ ಮಾಡುತ್ತವೆ. ಈ ಬಗ್ಗೆ ಜ್ಞಾನದ ಕೊರತೆ ಇರುವ ಅಧಿಕಾರಿಗಳು ಏನೇನೋ ಮಾಡಿ, ಮತ್ತಷ್ಟು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎನ್ನುವುದು ಹೋರಾಟಗಾರರ ಮಾತು.

ಇದನ್ನೂ ಓದಿ: 

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗೆ ಆಗ್ರಹ; ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್​ 15ರಿಂದ ಮತ್ತೆ ಹೋರಾಟ

ಕೊಪ್ಪಳದಲ್ಲಿ ಹಸಿರು ಮಾನವೀಯತೆ; ರಸ್ತೆ ಬದಿಯಲ್ಲಿ ಒಣಗಿ ಹೋಗುತ್ತಿದ್ದ ಗಿಡಗಳಿಗೆ ನೀರುಣಿಸಿದ ದ್ವಾರಕಾಮಯಿ ಟ್ರಸ್ಟ್ ಸದಸ್ಯರು

(Dharwad People urges officers to save someshwara lake in Lakamanagalli Dharwad)

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ