AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​

ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸುತ್ತಿಕೊಂಡಿದ್ದು, ಮತ್ತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್​ ಮತ್ತೆ ಶಾಕ್ ಕೊಟ್ಟಿದೆ. ಇದರಿಂದ ಕಾಂಗ್ರೆಸ್​​ ಎಂಎಲ್​​ಎಗೆ ಜೈಲೇ ಗತಿಯಾಗಿದೆ. ಇನ್ನು ಹೈಕೋರ್ಟ್ ಹೇಳಿದ್ದೇನು ಎನ್ನುವ ಮಾಹಿತಿ ಇಲ್ಲಿದೆ.

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​
Vinay Kulkarni
Ramesha M
| Edited By: |

Updated on:Jan 27, 2026 | 5:30 PM

Share

ಬೆಂಗಳೂರು, (ಜನವರಿ 27): ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ((Yogesh Gowda Murder Case)) 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಸಿದೆ. ಸುಪ್ರೀಂಕೋರ್ಟ್​ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ (Karnataka High Court) ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.

ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ 15ನೇ ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಗೆ 2021ರಲ್ಲೇ ಕೋರ್ಟ್​​ನಿಂದ ಜಾಮೀನು ಸಿಕ್ಕಿತ್ತು. ಆದ್ರೆ, ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್​ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಾಯ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್​ ಹೇಳಿದಂತೆ ವಿನಯ್ ಕುಲಕರ್ಣಿ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು.

ಇದನ್ನೂ ನೋಡಿ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್

2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಹತ್ಯೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಬಿಜೆಪಿಯ ಯೋಗೇಶ್ ಗೌಡರನ್ನು 2016ರ ಜೂನ್ 15ರಂದು ಧಾರವಾಡದ ಸಪ್ತಪುರದ ಜಿಮ್‌ನಲ್ಲಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಲ್ಲಿ 21 ಆರೋಪಿಗಳು ಶಾಮೀಲಾಗಿದ್ದಾರೆ ಎಂಬ ಮಾಹಿತಿ ಇದೆ. ಆರಂಭದಲ್ಲಿ ಸ್ಥಳೀಯ ಪೊಲೀಸರು 6 ಮಂದಿಯನ್ನು ಆರೋಪಿಗಳಾಗಿ ಗುರುತಿಸಿದ್ದರು, ಆದರೆ ಯೋಗೇಶ್‌ ಗೌಡ ಕುಟುಂಬದ ಅರ್ಜಿಯ ಮೇರೆಗೆ ಬಿಜೆಪಿ ಸರ್ಕಾರದಿಂದ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.

ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿ ಹೆಸರು

ಸಿಬಿಐ ತನಿಖೆಯಲ್ಲಿ15 ಮಂದಿ ಹೆಚ್ಚಿನ ಆರೋಪಿಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹೆಸರೂ ಸೇರಿಸಲಾಗಿತ್ತು. ಹತ್ಯೆಯ ಹಿಂದೆ ರಾಜಕೀಯ ಶತ್ರುತ್ವ ಮತ್ತು ವೈಯಕ್ತಿಕ ಜಗಳವಿದೆ ಎಂದು ಸಿಬಿಐ ಹೇಳಿತ್ತು. ಮುಖ್ಯ ಆರೋಪಿ ಬಸಪ್ಪ ಶಿವಪ್ಪ ಮುತ್ತಗಿ ಅವರು ಪ್ಲಾನ್ ಮಾಡಿ ಹತ್ಯೆ ನಡೆಸಿದ್ದಾನೆ ಅಂತ ಕುಟುಂಬಸ್ಥರು ಆರೋಪಿಸಿದ್ದರು. ಪ್ರಕರಣದ ತನಿಖೆ ಆರಂಬಿಸಿದ್ದ ಸಿಬಿಐ, 2020 ನವೆಂಬರ್ 05ರಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಿತ್ತು. ಬಳಿಕ ವಿನಯ್ ಕುಲಕರ್ಣಿ 2021ರಲ್ಲಿ ಜಾಮೀನಿನ ಮೇಲೆ ಆಚೆ ಬಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:12 pm, Tue, 27 January 26

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ಕತ್ತರಿಸಿದ ನಂತರವೂ ಸಾಯದೆ ಚಡಪಡಿಸುತ್ತಿರುವ ಮೀನು! ವಿಡಿಯೋ ನೋಡಿ
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!