ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಅತಿವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಮಾಡಲು ಸರ್ಕಾರ ಮುಂದಾಗಿದ್ದು, ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ಆಕ್ರೋಶ ಹೊರಹಾಕಿದರು.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 03, 2024 | 7:23 PM

ಹುಬ್ಬಳ್ಳಿ, ಸೆ.03: ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನಲೆ ಸಿದ್ದರಾಮಯ್ಯ (Siddaramaiah) ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ(Pralhad Joshi) ವಾಗ್ದಾಳಿ ನಡೆಸಿದ್ದಾರೆ. ‘ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.

ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ಹಾಲಿನ ದರ ಕಡಿತದಿಂದ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುತ್ತಿದ್ದು, ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಇನ್ನು ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್​ಗೆ 28 ರಿಂದ 29 ರೂ.ನೀಡುತ್ತಿವೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದು, ಒಂದೆಡೆ, ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 3 September 24

ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
ಮನೆಯಲ್ಲಿ ಬ್ರಹ್ಮ ಕಮಲ ಗಿಡ ಇದ್ದರೆ ಇದೆ ಅನೇಕ ಪ್ರಯೋಜನ!
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
Daily Horoscope: ಈ ರಾಶಿಯವರಿಗಿಂದು 5 ರಾಶಿಗಳ ಶುಭ ಫಲ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ