AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nandgarh in Dharwad: ಧಾರವಾಡ ಜಿಲ್ಲೆಯಲ್ಲಿ 105 ನಂದಘರ್ ಗಳ ನಿರ್ಮಿಸುವ ಮೂಲಕ ಬೆಳೆಯುವ ಸಿರಿಗೆ ನೀರೆರೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Pralhad Joshi: ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 105 ಅಂಗನವಾಡಿ ಕೇಂದ್ರಗಳನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ನಂದಘರ್ ಗಳನ್ನಾಗಿ ಉನ್ನತೀಕರಣ ಮಾಡಲಾಗಿದೆ.

Nandgarh in Dharwad: ಧಾರವಾಡ ಜಿಲ್ಲೆಯಲ್ಲಿ 105 ನಂದಘರ್ ಗಳ ನಿರ್ಮಿಸುವ ಮೂಲಕ ಬೆಳೆಯುವ ಸಿರಿಗೆ ನೀರೆರೆದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಧಾರವಾಡ ಜಿಲ್ಲೆಯಲ್ಲಿ 105 ನಂದಘರ್ ಗಳ ನಿರ್ಮಾಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 31, 2023 | 9:00 PM

Share

ಧಾರವಾಡ, ಜುಲೈ 31: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು (Union Minister Pralhad Joshi) ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂಗನವಾಡಿಗಳನ್ನ (Anganwadi) ಉನ್ನತೀಕರಿಸಿ ನಂದಘರ್ (Nandgarh in Dharwad) ಗಳನ್ನಾಗಿ ಮಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.

ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ನಂದಘರ್ ಗಳನ್ನ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿವೃದ್ಧಿಯ ಹಾದಿಯಲ್ಲಿ ಪ್ರತಿ ಯೋಜನೆಯನ್ನ ಕ್ಷೇತ್ರಕ್ಕೆ ತರುವ ಮೂಲಕ ಗಣನೀಯ ಸಾಧನೆ ಮಾಡಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 105 ಅಂಗನವಾಡಿ ಕೇಂದ್ರಗಳನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ನಂಧಘರ್ ಗಳನ್ನಾಗಿ ಉನ್ನತೀಕರಣ ಮಾಡಲಾಗಿದೆ.

ಇದನ್ನೂ ಓದಿ: ಎನ್​ಡಿಎ 25ನೇ ವಾರ್ಷಿಕೋತ್ಸವ ಆಚರಣೆಗೆ ಪ್ರಧಾನಿ ಮೋದಿ ಕರೆ – ಪ್ರಲ್ಹಾದ್ ಜೋಶಿ

ಈ ಮಾದರಿಯಲ್ಲಿ ಧಾರವಾಡ‌ ಲೋಕಸಭಾ ಕ್ಷೇತ್ರದಲ್ಲಿ ವಿನೂತನ ಹಾಗೂ ಜನಪರವಾದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿರಂತರ ವಿಕಾಸದ ಹಾದಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ಧಾರವಾಢ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Mon, 31 July 23

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು