ಧಾರವಾಡ, ಜುಲೈ 31: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು (Union Minister Pralhad Joshi) ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂಗನವಾಡಿಗಳನ್ನ (Anganwadi) ಉನ್ನತೀಕರಿಸಿ ನಂದಘರ್ (Nandgarh in Dharwad) ಗಳನ್ನಾಗಿ ಮಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಮಾದರಿಯಾಗಿ ನಿಂತಿದ್ದಾರೆ.
ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ನಂದಘರ್ ಗಳನ್ನ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿವೃದ್ಧಿಯ ಹಾದಿಯಲ್ಲಿ ಪ್ರತಿ ಯೋಜನೆಯನ್ನ ಕ್ಷೇತ್ರಕ್ಕೆ ತರುವ ಮೂಲಕ ಗಣನೀಯ ಸಾಧನೆ ಮಾಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 105 ಅಂಗನವಾಡಿ ಕೇಂದ್ರಗಳನ್ನು ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ನಂಧಘರ್ ಗಳನ್ನಾಗಿ ಉನ್ನತೀಕರಣ ಮಾಡಲಾಗಿದೆ.
ಇದನ್ನೂ ಓದಿ: ಎನ್ಡಿಎ 25ನೇ ವಾರ್ಷಿಕೋತ್ಸವ ಆಚರಣೆಗೆ ಪ್ರಧಾನಿ ಮೋದಿ ಕರೆ – ಪ್ರಲ್ಹಾದ್ ಜೋಶಿ
ಈ ಮಾದರಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವಿನೂತನ ಹಾಗೂ ಜನಪರವಾದ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿರಂತರ ವಿಕಾಸದ ಹಾದಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.
ಧಾರವಾಢ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:59 pm, Mon, 31 July 23