ಕರ್ನಾಟಕದ ರೈತರಿಗಾಗಿ ಕೇಂದ್ರದಿಂದ 484 ಕೋಟಿ ರೂ ವೆಚ್ಚದ 167 ನೀರಾವರಿ ಯೋಜನೆ: ಶೀಘ್ರವೇ ಅನುಮೋದನೆ ಕೋರಿ ಜಲ ಸಚಿವ ಶೇಖಾವತ್ ಗೆ ಪ್ರಲ್ಹಾದ ಜೋಶಿ ಮನವಿ

Pralhad Joshi: ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವನಾಗಿ ರಾಜ್ಯದ ರೈತರ ಸಮಸ್ಯೆಯನ್ನು ಇಂದು ಕೇಂದ್ರ ಜಲ ಶಕ್ತಿ ಸಚಿವರಿಗೆ ಮನ ಮುಟ್ಟುವಂತೆ ವಿವರಿಸಿದ್ದೇನೆ, ಇದಕ್ಕೆ ಕೇಂದ್ರ ಜಲಶಕ್ತಿ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ರಾಜ್ಯದ ಈ 167 ಯೋಜನೆಗಳಗೆ ಅನುಮೋದನೆ ಸಿಗಲಿದೆ ಎಂದೂ ಪ್ರಲ್ಹಾದ ಜೋಶಿ ಆಶಾಭಾವ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ರೈತರಿಗಾಗಿ ಕೇಂದ್ರದಿಂದ 484 ಕೋಟಿ ರೂ ವೆಚ್ಚದ 167 ನೀರಾವರಿ ಯೋಜನೆ: ಶೀಘ್ರವೇ ಅನುಮೋದನೆ ಕೋರಿ  ಜಲ ಸಚಿವ ಶೇಖಾವತ್ ಗೆ ಪ್ರಲ್ಹಾದ ಜೋಶಿ ಮನವಿ
ಶೀಘ್ರ ಅನುಮೋದನೆ ಕೋರಿ ಜಲ ಸಚಿವ ಶೇಖಾವತ್ ಗೆ ಪ್ರಲ್ಹಾದ ಜೋಶಿ ಮನವಿ
Follow us
|

Updated on: Nov 10, 2023 | 10:43 AM

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಅಂದಾಜು 484 ಕೋಟಿ ವೆಚ್ಚದ 167 ನೀರಾವರಿ ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ (Jal Shakti Minister Gajendra Singh Shekhawat) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ ಯೋಜನೆಯ ಉದ್ದೇಶ ಕೃಷಿ ಭೂಮಿಯ ಮಟ್ಟದಲ್ಲಿ ನೀರಾವರಿಗಾಗಿ ತಗಲುವ ವೆಚ್ಚವನ್ನು ಸರಳೀಕರಿಸುವುದು/ಕನಿಷ್ಠಗೊಳಿಸುವುದಾಗಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೃಷಿ ಭೂಮಿಯನ್ನು ನೀರಾವರಿ ವಿಧಾನಗಳಿಗೆ (Irrigation) ಒಳಪಡುವಂತೆ ಮಾಡುವುದು. ನೀರಾವರಿ ಜಮೀನಿನಲ್ಲಿ ಬಳಸುವ ನೀರು ಸಮರ್ಥವಾಗಿ ಜಮೀನಿಗೆ ಮಾತ್ರ ಬಳೆಕೆಯಾಗಬೇಕು. ಈ ನಿಟ್ಟಿನಲ್ಲಿ ನೀರಾವರಿ ಮಾದರಿಯ ದಕ್ಷತೆಯ ಬಗ್ಗೆ ಕಾಳಜಿ ವಹಿಸುವಂತಹ ಯೋಜನೆಗಳು ಎಂಬುರು ಈ ಯೋಜನೆಗಳ ವಿಶೇಷ. ಇವುಗಳನ್ನು ಜಾರಿ ಮಾಡುವ ಮೂಲಕ ಕರ್ನಾಟಕದ ರೈತರಿಗೆ ಅನುಕೂಲ ಮಾಡಿಕೊಡುವುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ (Union Minister Pralhad Joshi) ಉದ್ದೇಶವಾಗಿದೆ.

ಕರ್ನಾಟಕದ ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕದ ಬಹುತೇಕ ಪ್ರದೇಶದ ಹಳ್ಳಗಳು ಮಳೆಗಾಲದಲ್ಲಿ ಪ್ರವಾಹಕ್ಕೆ ತುತ್ತಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅದೇ ಪ್ರವಾಹದ ನೀರನ್ನು ನಿಯಂತ್ರಿಸುವುದು ಹಾಗೂ ಆ ಮೂಲಕ ನೀರನ್ನು ಸಂಗ್ರಹಿಸಿ ಕೃಷಿ ಭೂಮಿಗೆ ಬಳಸುವುದು. ಈ ಮೂಲಕ ಮುಂಬರುವ ಬೆಳೆಗಳಿಗೆ ರೈತರು ಅದೇ ನೀರಿನ ಸದುಪಯೋಗವನ್ನು ನೀರಾವರಿ ಯೋಜನೆಯಾಗಿ ಪಡೆಯಲು ಈ ಯೋಜನೆ ಅತ್ಯುಪಯುಕ್ತವಾಗಿದೆ. ಕರ್ನಾಟಕದ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಈ ಯೋಜನೆ ಜಾರಿಗೆ ಬಂದ ನಂತರ ಕೃಷಿ ಕೆಲಸ ಮಾಡುವ ರೈತರ ಪಾಲಿಗೆ ಈ ಯೋಜನೆ ವರದಾನವಾಗಲಿದೆ.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನ ಭೇಟಿ ಮಾಡಿ ಈ ಯೋಜನೆಗಳ ಅನುಷ್ಟಾನಕ್ಕೆ ಮನವಿ ಮಾಡಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರ ಪರವಾಗಿ ಕೈಗೊಳ್ಳುತ್ತಿರುವ ಅನೇಕ ಯೋಜನೆಗಳ ಪೈಕಿ ಇದು ಪ್ರಮುಖವಾದುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವಾಗಲು ರೈತರ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿದೆ ಎಂಬುದಕ್ಕೆ ಇದು‌ ಮತ್ತೊಂದು ಸಾಕ್ಷಿ ಎಂದಿದ್ದಾರೆ.

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವನಾಗಿ ರಾಜ್ಯದ ರೈತರ ಸಮಸ್ಯೆಯನ್ನು ಇಂದು ಕೇಂದ್ರ ಜಲ ಶಕ್ತಿ ಸಚಿವರಿಗೆ ಮನ ಮುಟ್ಟುವಂತೆ ವಿವರಿಸಿದ್ದೇನೆ, ಇದಕ್ಕೆ ಕೇಂದ್ರ ಜಲಶಕ್ತಿ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಶೀಘ್ರದಲ್ಲಿಯೇ ರಾಜ್ಯದ ಈ 167 ಯೋಜನೆಗಳಗೆ ಅನುಮೋದನೆ ಸಿಗಲಿದೆ ಎಂದೂ ಪ್ರಲ್ಹಾದ ಜೋಶಿಯವರು ಆಶಾಭಾವ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ