Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: 35 ಆರೋಪಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

2022 Hubballi riots: 2022ರ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 35 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: 35 ಆರೋಪಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 15, 2023 | 4:00 PM

ಹುಬ್ಬಳ್ಳಿ, (ಡಿಸೆಂಬರ್ 15): ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 Hubballi riots) ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್​ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್​ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ಒಟ್ಟು 152 ಆರೋಪಿಗಳ ಬಂಧನವಾಗಿದ್ದು, ಈ ಹಿಂದೆ ಕೆಲ ಬಾಲಾಪರಾಧಿಗಳು ಸೇರಿ 10ಕ್ಕೂ ಹೆಚ್ಚು ಮಂದಿಗೆ ಜಾಮೀನು ಸಿಕ್ಕಿತ್ತು. ಮೊನ್ನೇ ಸೋಮವಾರ ಅಷ್ಟೇ ಬಂಧಿತರಾಗಿದ್ದ ಸಿಕಂದರ್ ಮತ್ತು ಇರ್ಫಾನ್ ನಾಲತವಾಡ ಗೆ ಸುಪ್ರೀಂ ಕೋರ್ಟ್​ ಜಾಮೀನು ನೀಡಿತ್ತು. ಇದೀಗ 35 ಆರೋಪಿಗೂ ಸಹ ಜಾಮೀನು ಸಿಕ್ಕಿದೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್​ಗಳು ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಿಎಂ ಸ್ಪಷ್ಟನೆ

ಏನಿದು ಹುಬ್ಬಳ್ಳಿ ಗಲಭೆ ಪ್ರಕರಣ?

ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್​ 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್​ ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್​ ಠಾಣೆ ಮುಂದೆ ಸೇರಿ ಗಲಾಟೆ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ರೀತಿ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ, ಮನೆಗಳ​ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು. ಘಟನೆಯಲ್ಲಿ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿದ್ದು, ಇನ್ಸ್​ಪೆಕ್ಟರ್ ಸೇರಿ 7 ಸಿಬ್ಬಂದಿ ಮೇಲೆ ಹಲ್ಲೆಯಾಗಿತ್ತು. ಈ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.  ಇನ್ನು ಈ ಗಲಭೆ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು ದಾಖಲಾಗಿದ್ದು, ಒಟ್ಟು 152 ಆರೋಪಿಗಳ ಬಂಧನವಾಗಿತ್ತು.

ಪ್ರಕರಣ ಕೈ ಬಿಡಲು ಪತ್ರ ಬರೆದಿದ್ದ ಡಿಕೆಶಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವಂತೆ ಡಿಸಿಎಂ ಡಿಕೆ ಶಿವಕುಮಾರ್​ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಡಿಕೆಶಿ ಅವರ ಪತ್ರ ಆಧರಿಸಿ ಪ್ರಕರಣದ ಮಾಹಿತಿಯನ್ನು ಸಲ್ಲಿಸುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್​ ಆಯುಕ್ತರಿಗೆ ಎಡಿಜಿಪಿ ಸೂಚಿಸಿದ್ದರು. ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಹಿತ ಅಭಿಪ್ರಾಯ ಹಾಗೂ ಸೆಪ್ಟೆಂಬರ್​ 30ರೊಳಗೆ ಪ್ರಕರಣದ ಪೂರ್ಣ ವಿವರವನ್ನು ನೀಡುವಂತೆ ಸೂಚನೆ ಕೂಡ ನೀಡಲಾಗಿತ್ತು. ಡಿಸಿಎಂ ಡಿಕೆ ಶಿವಕುಮಾರ ಅವರು ಗೃಹ ಇಲಾಖೆಗೆ ಪತ್ರ ಬರೆದಿರುವ ವಿಚಾರ ಸುದ್ದಿ ಆಗುತ್ತಿದಂತೆ ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Fri, 15 December 23

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ