ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ- ಜಯಮೃತ್ಯುಂಜಯ ಸ್ವಾಮೀಜಿ

ಸರ್ಕಾರ ನೀಡಿದ ಅವಧಿ ಸೆಪ್ಟೆಂಬರ್ಗೆ ಮುಕ್ತಾಯವಾಗಲಿದೆ. ನಾವು ಸುಮ್ಮನೆ ಕುರಬಾರದು. ಸಿಎಂ ಬಸವರಾಜ ಬೊಮ್ಮಾಯಿ ನಮಗೆ ಅಂದು ಹೇಳಿದ್ದರು. ಈಗ ಅವರೇ ಸಿಎಂ ಆಗಿದ್ದಾರೆ ಹಾಗಾಗಿ ಭರವಸೆ ಈಡೇರಿಸಲಿ. ಯಾರು ಪಂಚಮಸಾಲಿಗಳ ವಿಶ್ವಾಸ ಉಳಿಸಿಕೊಳ್ಳುತ್ತಾರೋ ಅವರು ಎತ್ತರದ ಸ್ಥಾನಕ್ಕೆ ಹೋಗುತ್ತಾರೆ. -ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ-  ಜಯಮೃತ್ಯುಂಜಯ ಸ್ವಾಮೀಜಿ
Follow us
TV9 Web
| Updated By: ಆಯೇಷಾ ಬಾನು

Updated on:Aug 12, 2021 | 1:32 PM

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿ ನಮ್ಮ ಪಂಚಮಸಾಲಿ ಹೋರಾಟದ ಫಲವಾಗಿ ಕೇಂದ್ರ ಮೀಸಲಾತಿ ಹಕ್ಕನ್ನ ರಾಜ್ಯ ಸರ್ಕಾರಗಳಿಗೆ ನೀಡಿದೆ ಎಂದು ಹುಬ್ಬಳ್ಳಿಯ ಪಂಚಮಸಾಲಿ ಸಮಾಜದ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಸರ್ಕಾರ ನೀಡಿದ ಅವಧಿ ಸೆಪ್ಟೆಂಬರ್ಗೆ ಮುಕ್ತಾಯವಾಗಲಿದೆ. ನಾವು ಸುಮ್ಮನೆ ಕುರಬಾರದು. ಸಿಎಂ ಬಸವರಾಜ ಬೊಮ್ಮಾಯಿ ನಮಗೆ ಅಂದು ಹೇಳಿದ್ದರು. ಈಗ ಅವರೇ ಸಿಎಂ ಆಗಿದ್ದಾರೆ ಹಾಗಾಗಿ ಭರವಸೆ ಈಡೇರಿಸಲಿ. ಯಾರು ಪಂಚಮಸಾಲಿಗಳ ವಿಶ್ವಾಸ ಉಳಿಸಿಕೊಳ್ಳುತ್ತಾರೋ ಅವರು ಎತ್ತರದ ಸ್ಥಾನಕ್ಕೆ ಹೋಗುತ್ತಾರೆ. ಕೆಲವೊಂದು ಸ್ವಾಮೀಜಿಗಳು ದುಡ್ಡು ಕೊಟ್ಟು ಟಿವಿಯಲ್ಲಿ ಪ್ರಚಾರ ಪಡೆದುಕೊಂಡಿದ್ದಾರೆ‌. ಆದ್ರೆ ನಾವು ಹೋರಾಟ ಕೈ ಬೀಡಲಿಲ್ಲ. ನಾವು ಇಂದು ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

2ಎ ಮೀಸಲಾತಿ ಘೋಷಿಸದಿದ್ದರೆ ಅ 1ರಿಂದ ಧರಣಿ ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸೂಕ್ತ ಸಮಯಕ್ಕೆ ಸೂಕ್ತ ಮುಖ್ಯಮಂತ್ರಿ ಬಂದಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದ ಅವರು, ಈ ಹಿಂದೆ ಧರಣಿ ವೇಳೆ ಬಸವರಾಜ ಬೊಮ್ಮಾಯಿ ಗೃಹಸಚಿವರಾಗಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೊಮ್ಮಾಯಿ 3 ಬಾರಿ ಗೆಲ್ಲಲು ನಮ್ಮ ಸಮಾಜ ಕಾರಣ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಬೇಸರವಿದೆ. ಈ ಬೇಸರ ನಿವಾರಣೆ ಆಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಸಲಹೆ ಮಾಡಿದರು.

ಪಂಚಮಸಾಲಿ ಹಾಗೂ ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಸಮಾವೇಶ ನಡೆಸಿ ನಮ್ಮ ಹಕ್ಕೊತ್ತಾಯ ಮಂಡಿಸಿದ್ದೆವು. ಈ ಬಗ್ಗೆ ಅಧಿವೇಶನದಲ್ಲಿ ಮಾತು ನೀಡಿದ್ದ ಸರ್ಕಾರವು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆ. ನಮ್ಮ ಹಿಂದೆ ನಡೆಸಿದ ಸಮಾವೇಶಕ್ಕೆ ಸಹಕರಿಸಿದ್ದ ಬಸವರಾಜ ಬೊಮ್ಮಾಯಿಯವರು ಈಗ ಸಿಎಂ ಆಗಿದ್ದಾರೆ. ಹಾಗಾಗಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮತ್ತೆ ನೆನಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: 2ಎ ಮೀಸಲಾತಿ ಘೋಷಿಸದಿದ್ದರೆ ಅ 1ರಿಂದ ಧರಣಿ: ಜಯಮೃತ್ಯುಂಜಯ ಸ್ವಾಮೀಜಿ

Published On - 1:27 pm, Thu, 12 August 21