AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ಗಣೇಶ ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಕರ್ನಾಟಕಕ್ಕೆ ಮತ್ತೊಂದು ಗಿಫ್ಟ್​ ನೀಡಿದೆ. ಅದೇ ವಂದೇ ಭಾರತ್ ರೈಲು. ಈ ರೈಲು ಎಲ್ಲಿಂದ ಎಲ್ಲಿಗೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು
ವಂದೇ ಭಾರತ್ ರೈಲು
ರಮೇಶ್ ಬಿ. ಜವಳಗೇರಾ
|

Updated on: Sep 09, 2024 | 6:53 PM

Share

ಹುಬ್ಬಳ್ಳಿ, (ಸೆಪ್ಟೆಂಬರ್ 09): ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ್ ಎರಡನೇ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ, ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ.

ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಟ್ಟದಲ್ಲಿ Mpox ಪ್ರಕರಣ ಏರಿಕೆ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ, ಸೂಚನೆ ನೀಡಿದ ಕೇಂದ್ರ

ವಂದೇ ಭಾರತ್ ಗೆ ಮನವಿ ಮಾಡಿದ್ದ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು.

ಕರ್ನಾಟಕದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು. ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು.

ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಪ್ರಧಾನಿಗೆ, ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ: ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?