AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ- ಧಾರವಾಡ: ವಿವಿಧ ವಾರ್ಡುಗಳ 34 ಬಂಡಾಯ ಅಭ್ಯರ್ಥಿಗಳನ್ನು ಉಚ್ಛಾಟಿಸಿದ ಕಾಂಗ್ರೆಸ್

Hubli Dharwad: ಕಾಂಗ್ರೆಸ್ ಪಕ್ಷದ ನೀತಿ ವಿರುದ್ಧ ಬಂಡಾಯವೆದ್ದ ಅಭ್ಯರ್ಥಿಗಳ ಉಚ್ಚಾಟನೆ ಮಾಡಲಾಗಿದೆ. ಕೈ ನಾಯಕರ ಮನವೊಲಿಕೆಗೂ ಮಣಿಯದೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. 

ಹುಬ್ಬಳ್ಳಿ- ಧಾರವಾಡ: ವಿವಿಧ ವಾರ್ಡುಗಳ 34 ಬಂಡಾಯ ಅಭ್ಯರ್ಥಿಗಳನ್ನು ಉಚ್ಛಾಟಿಸಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 30, 2021 | 2:53 PM

Share

ಹುಬ್ಬಳ್ಳಿ: ಸೆಪ್ಟೆಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಈ ಮಧ್ಯೆ, ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದ ಅಭ್ಯರ್ಥಿಗಳನ್ನು ಉಚ್ಚಾಟನೆ ಮಾಡಲಾಗಿದೆ. 34 ಅಭ್ಯರ್ಥಿಗಳನ್ನು ಉಚ್ಚಾಟನೆ ಮಾಡಿ ಕಾಂಗ್ರೆಸ್ ಆದೇಶ ಹೊರಡಿಸಿದೆ. ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಆದೇಶ ನೀಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣರಿಂದ ಆದೇಶ ಹೊರಡಿಸಲಾಗಿದೆ.

ವಿವಿಧ ವಾರ್ಡುಗಳ 34 ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ನೀತಿ ವಿರುದ್ಧ ಬಂಡಾಯವೆದ್ದ ಅಭ್ಯರ್ಥಿಗಳ ಉಚ್ಚಾಟನೆ ಮಾಡಲಾಗಿದೆ. ಕೈ ನಾಯಕರ ಮನವೊಲಿಕೆಗೂ ಮಣಿಯದೆ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 23 ಅಂಶಗಳ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಅವಳಿ ನಗರಗಳಾದ ಹುಬ್ಬಳ್ಳಿ- ಧಾರವಾಡ ನಡುವೆ ಮೆಟ್ರೋ ರೈಲು ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಜನರ ಆರೋಗ್ಯಕ್ಕೆ ಒತ್ತು, ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲೆ ನಿರ್ಮಾಣ ಮಾಡುವುದಾಗಿಯೂ ಕಾಂಗ್ರೆಸ್ ತಿಳಿಸಿದೆ. ಜತೆಗೆ ರಾಜಕಾಲುವೆ ದುರಸ್ತಿ, ಕ್ರೀಡಾಂಗಣ ನಿರ್ಮಾಣ ಮಾಡುವುದು ಕಾಂಗ್ರೆಸ್ ಘೋಷಿಸಿದ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ. ಪಾಲಿಕೆ ಚುನಾವಣೆಯ ಕೈ ಪಕ್ಷದ ಉಸ್ತುವಾರಿ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು  ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿತ್ತು. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿತ್ತು. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದ್ದರು. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ- ಧಾರವಾಡ: ಇನ್ನೊಮ್ಮೆ ಅಧಿಕಾರ ಕೊಟ್ಟರೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣ ಮಾಡ್ತೇವೆ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ: ನಾಮಪತ್ರ ಸಲ್ಲಿಸಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಹೃದಯಾಘಾತ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​