Independence Day celebration: ಕೇಂದ್ರ ಸಚಿವ ಪಲ್ಹಾದ ಜೋಶಿ ಅವರ ಕಛೇರಿಯಲ್ಲಿ ಆಟೋ ಚಾಲಕರಿಂದ ಧ್ವಜಾರೋಹಣ, ಸ್ಮರಣಿಕೆಗಳ ಹಂಚಿಕೆ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ಮಹೋತ್ಸವದಲ್ಲಿ ಭಾಗವಹಿಸಿರುವುದರಿಂದ ಅವರ ಆಶಯದಂತೆ ಇಂದು ಧಾರವಾಡ ಜಿಲ್ಲಾ ಆಟೋ ಚಾಲಕರನ್ನು ಕಾರ್ಯಾಲಯಕ್ಕೆ ಸ್ವಾಗತಿಸಿ ಅವರಿಂದ ಧ್ವಜಾರೋಣ ನೆರವೇರಿಸಿ 77ನೇ ಸ್ವಾತಂತ್ರೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗಿದೆ. ಆಜಾದಿ ಕಾ ಅಮೃತ ಮಹೋತ್ಸವದ ಸವಿನೆಪಿಗಾಗಿ ಆಟೋ ಚಾಲಕರಿಗೆ ತಮ್ಮ ಮನೆಯಲ್ಲಿ ಶಾಶ್ವತವಾಗಿ ಇಟ್ಟುಕೊಳ್ಳುವಂತಹ ಭಾರತದ ಧ್ವಜವಿರುವ ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು.

Independence Day celebration: ಕೇಂದ್ರ ಸಚಿವ ಪಲ್ಹಾದ ಜೋಶಿ ಅವರ ಕಛೇರಿಯಲ್ಲಿ ಆಟೋ ಚಾಲಕರಿಂದ ಧ್ವಜಾರೋಹಣ, ಸ್ಮರಣಿಕೆಗಳ ಹಂಚಿಕೆ
ಕೇಂದ್ರ ಸಚಿವ ಪಲ್ಹಾದ ಜೋಶಿ ಅವರ ಕಛೇರಿಯಲ್ಲಿ ಆಟೋ ಚಾಲಕರಿಂದ ಧ್ವಜಾರೋಹಣ
Follow us
ಸಾಧು ಶ್ರೀನಾಥ್​
|

Updated on:Aug 15, 2023 | 3:48 PM

ಹುಬ್ಬಳ್ಳಿ, ಆ. 15 : ಕೇಂದ್ರ ಸಚಿವ ಪಲ್ಹಾದ ಜೋಶಿಯವರ (Union Minister Pralhad Joshi) ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು (77 Independence Day celebration) ಆಟೋ ಚಾಲಕರಿಂದ (Auto Drivers) ಧ್ವಜಾರೋಹಣ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಆಟೋ ಚಾಲಕರ ಸಂಘದ ಆಧ್ಯಕ್ಷ ಶ್ರೀ ಶಂಕ್ರಯ್ಯ ಮಠಪತಿ ಇವರು ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ ಅವರು “ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ಮಹೋತ್ಸವದಲ್ಲಿ ಭಾಗವಹಿಸಿರುವುದರಿಂದ ಅವರ ಆಶಯದಂತೆ ಇಂದು ಧಾರವಾಡ ಜಿಲ್ಲಾ ಆಟೋ ಚಾಲಕರನ್ನು ಕಾರ್ಯಾಲಯಕ್ಕೆ ಸ್ವಾಗತಿಸಿ ಅವರಿಂದ ಧ್ವಜಾರೋಣ ನೆರವೇರಿಸಿ 77ನೇ ಸ್ವಾತಂತ್ರೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದೇವೆ. ಆಜಾದಿ ಕಾ ಅಮೃತ ಮಹೋತ್ಸವದ ಸವಿನೆಪಿಗಾಗಿ ಆಟೋ ಚಾಲಕರುಗಳು ತಮ್ಮ ಮನೆಯಲ್ಲಿ ಶಾಶ್ವತವಾಗಿ ಇಟ್ಟುಕೊಳ್ಳುವಂತಹ ಭಾರತದ ಧ್ವಜವಿರುವ ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಿದ್ದೇವೆ, ಈ ಸುಸಂದರ್ಭದಲ್ಲಿ ನಾವೆಲ್ಲರೂ ಭಾರತ ದೇಶದ ಪ್ರಜೆಯಾಗಿರುವುದಕ್ಕೆ ಹೆಮ್ಮೆ ಪಡಬೇಕು. ನಾವಿಂದು ಇಲ್ಲಿ ಸ್ವತಂತ್ರವಾಗಿ, ಶಿಸ್ತಿನಿಂದ ಇದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ನಮ್ಮ ಸಂವಿಧಾನ ಎಂದು ಹೇಳಿದರು.

ಇನ್ನು, ಧ್ವಜಾರೋಹಣ ಮಾಡಿದ ಆಟೋ ಚಾಲಕ ಸಂಘದ ಪ್ರಮುಖರಾದ ಶಂಕ್ರಯ್ಯ ಮಠಪತಿ ಧ್ವಜಾರೋಣ ಮಾಡಿ ಮಾತನಾಡಿ ” ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಮ್ಮನ್ನು ಗುರುತಿಸಿ ಅವಕಾಶ ಮಾಡಿಕೊಟ್ಟಿರುವ ಈ ನಡೆ ನಮ್ಮೆಲ್ಲರಿಗೂ ಜೀವನದಲ್ಲಿ ಸ್ಫೂರ್ತಿ ನೀಡಿದ ಕ್ಷಣ ಎಂದು ಭಾವಿಸುತ್ತೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸುವ ಅವರ ಮನೋಭಾವ ನಿಜಕ್ಕೂ ಮೆಚ್ಚತಕ್ಕದ್ದು. ಈ ಶುಭದಿನ ಮತ್ತು ಇಂತಹ ಐತಿಹಾಸಿಕ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲಾ ಮಹಾನ್ ವ್ಯಕ್ತಿಗಳಿಗೆ ಗೌರವವನ್ನು ಸಲ್ಲಿಸೋಣ ಎಂದರು.

Also Read: ಕರ್ನಾಟಕದ 13 ರೈಲು ನಿಲ್ದಾಣಗಳ ನವೀಕರಣಕ್ಕೆ ಮೋದಿ ಚಾಲನೆ: ಧಾರವಾಡದಲ್ಲಿ ಪ್ರಲ್ಹಾದ್​​​ ಜೋಶಿ ಮಾತು

ಇದೇ ಸಂಧರ್ಭದಲ್ಲಿ ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ರಾಮಣ್ಣ ಬಡಿಗೇರ, ಪ್ರಶಾಂತ ಹಾವಣಗಿ, ವೀರೇಶ ಸಂಗಳದ ಇನ್ನಿತರರು ಉಪಸ್ಥಿತರಿದ್ದರು. ಆಟೋ ಚಾಲಕರ ಸಂಘದ ಮುಖಂಡರುಗಳಾದ ಅಶೋಕ ಅಸೂಟಿ, ಉದಯ ಚವ್ಹಾಣ, ಶ್ರೀಕಾಂತ ಗಡಾದ, ಮಂಜುನಾಥ ಮುಳಗುಂದ, ಶ್ರೀಕಾಂತ ಕಲಾಲ, ಚಂದ್ರಗೌಡ ಪಾಟೀಲ, ಸಂಜು ಪವಾರ, ಶರಣ ಬುಗಡಿ ಗೋಪಾಲ ಸಿಂಗನಹಳ್ಳಿ, ಗಂಗಾಧರ ಹಳ್ಳಿ ಇನ್ನಿತರರಿದ್ದರು. ಈ ಸಂದರ್ಭದಲ್ಲಿ 60 ಜನ ಆಟೋ ಚಾಲಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಗೌರವಿಸಿ, ಸ್ಮರಣಿಕೆಗಳನ್ನು ನೀಡಲಾಯಿತು.

ದೆಹಲಿ ನಿವಾಸದಲ್ಲಿ ರಾಯಣ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಇನ್ನು ಅತ್ತ ದೆಹಲಿಯಲ್ಲಿ ತಮ್ಮ ಅಧಿಕೃತ ನಿವಾಸದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾಯಣ್ಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ತಾಯಿ ಭಾರತಿಯ ರಕ್ಷಣೆಗೆ ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಕನ್ನಡಿಗ, ನಾಡು ನುಡಿಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯ ಶುಭ ಸಂದರ್ಭದಲ್ಲಿ ಇಂದು ದೆಹಲಿಯ ನನ್ನ ನಿವಾಸದಲ್ಲಿ ರಾಯಣ್ಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವದ ನಮನ ಸಲ್ಲಿಸಿದೆನು ಎಂದು ಈ ಸಂದರ್ಭದಲ್ಲಿ ಟ್ವೀಟ್ ಮಾಡಿ, ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Tue, 15 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್