ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ(Police Station)ಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ(Arvind Bellad)​ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕುರಿತು ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 09, 2024 | 4:51 PM

ಹುಬ್ಬಳ್ಳಿ, ಜೂ.09: ಬಿಜೆಪಿ ಶಾಸಕ ಅರವಿಂದ ಬೆಲ್ಲದ(Arvind Bellad)​ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ(Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಏನಿದು ಘಟನೆ?

2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಕುರಿತು ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿಯನ್ನು ಹಿಂಪಡೆಯುವಂತೆ ಹೇಳಿ, ಉಪ ಮೇಯರ್ ಮೇಯ‌ರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರಂತೆ.

ಇದನ್ನೂ ಓದಿ:ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ; ವಿಧಾನಸೌಧ ಠಾಣೆಯಲ್ಲಿ 2 ಪ್ರಕರಣ ದಾಖಲು

ಈ ಹಿನ್ನಲೆ ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪರಶುರಾಮ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ  ಸೂಚನೆ ನೀಡಿದೆ. ಇದರಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us