ಹುಬ್ಬಳ್ಳಿ: ಆಟೋ ಚಾಲಕನೊಬ್ಬನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ ಪ್ರಕರಣದ ಮೂವರು ಅಪರಾಧಿಗಳಿಗೆ ನ್ಯಾಯಾಲಯ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ. 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗಳಿಗೆ ತಲಾ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 55,500 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಇಮಾಮ್ ಮಕಾಂದಾರ, ರಬ್ಬಾಣಿ ಸವಣೂರು ಹಾಗೂ ಮಾಲೂಬ್ ಶಿಗ್ಗಾಂವ ಶಿಕ್ಷೆಗೆ ಒಳಗಾದ ಅಪರಾಧಿಗಳು.
ಕರಾಟೆ, ಕಿರಣ ಅಗಸರ ಹಾಗೂ ಸುನೀಲ್ ದಿಲವಾಲೆ ಅಕ್ಷಯ ಪಾರ್ಕ್ನ ರವಿ ನಗರ ರಸ್ತೆಗೆ ಎಗ್ರೈಸ್ ತಿನ್ನಲು ಹೋಗಿದ್ದರು. ಅಲ್ಲಿಂದ ಹೊರಟು ಬರುವಾಗ ಆಟೋದಲ್ಲಿ ಬಂದ ಇಮಾಮ್ ಮಕಾಂದಾರ, ರಬ್ಬಾಣಿ ಸವಣೂರು ಹಾಗೂ ಮಾಲೂಟ ಶಿಗ್ಗಾಂವ ಕಿರಣ ಅಗಸರಿಗೆ ಆಟೋ ಡಿಕ್ಕಿ ಹೊಡೆದು, ಜಗಳ ತೆಗೆದಿದ್ದರು. ಬಳಿಕ ಅಟೋದಲ್ಲಿದ್ದ ಚಾಕುವಿನಿಂದ ಕಿರಣನ ಎಡ ಕೈಗೆ ಚುಚ್ಚಿ ಪರಾರಿಯಾಗಿದ್ದರು.
ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆಎನ್ ಗಂಗಾಧರ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಎಂ ಅಂಚಟಗೇರಿ ವಾದ ಮಂಡಿಸಿದ್ದರು.
ಕಾರು ಕದಿಯುತ್ತಿದ್ದ ಆರೋಪಿ ಸೆರೆ
ಟೆಸ್ಟ್ ಡ್ರೈವ್ ನೆಪದಲ್ಲಿ ಕಾರು ಕದಿಯುತ್ತಿದ್ದ ಆರೋಪಿ ಸೆರೆಯಾಗಿದ್ದಾನೆ. ಆರೋಪಿ ಮಾರಾಟಕ್ಕಿಟ್ಟಿದ್ದ ಕಾರು ಖರೀದಿಸುವ ನೆಪದಲ್ಲಿ ಟೆಸ್ಟ್ ಡ್ರೈವ್ ಮಾಡುತ್ತಿದ್ದ. ಬಳಿಕ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ವಂಚಿಸುತಿದ್ದ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯ ಶವ ಪತ್ತೆ
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕೊಲೆ ಮಾಡಿ ಶವ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಂತಾರಾಜ್ಯ ಕಳ್ಳ ಅರೆಸ್ಟ್
ಅಂತಾರಾಜ್ಯ ಬೈಕ್ ಕಳ್ಳನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರ, ಕರ್ನಾಟಕದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್‌ಗಳನ್ನು ಬೆಂಗಳೂರಿನಲ್ಲಿ ಮಾರುತ್ತಿದ್ದ. ಬಂಧಿತನಿಂದ ಪೊಲೀಸರು 10 ಬೈಕ್ಗಳನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ
ಮಜ್ಜಿಗೆ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?; ಕುತೂಹಲಕರ ಅಂಶಗಳು ಇಲ್ಲಿವೆ
ತವರು ಮನೆಗೆ ಬಂದ್ದಿದ್ದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ ನೀಡಿ 60 ಸಾವಿರ ದಂಡ ವಿಧಿಸಿದ ಮಧುಗಿರಿ ನ್ಯಾಯಾಲಯ
Published On - 12:27 pm, Thu, 25 November 21