AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಘೋರ ದುರಂತ, ಬಿಜೆಪಿ ಮುಖಂಡನ ಪುತ್ರ ಬಲಿ

ರೀಲ್ಸ್ ಹುಚ್ಚಾಟ ಹೆಚ್ಚಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ರೀಲ್ಸ್​ ಹುಚ್ಚಾಟಕ್ಕೆ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ರಸ್ತೆ, ಬೆಟ್ಟ, ರೈಲು ಸೇರಿದಂತೆ ಯಾವ ಜಾಗವನ್ನೂ ಬಿಡದೆ ರೀಲ್ಸ್‌ ಮಾಡುವವರು ಸಂಖ್ಯೆ ಹೆಚ್ಚಾಗಿದೆ. ಅದರಂತೆ ಅಪಾಯಕಾರಿ ರೀಲ್ಸ್ ಮಾಡಲು ಹೋಗಿ ಬಿಜೆಪಿ ಮುಖಂಡನ ಪುತ್ರ ಸಾವಿನ ಮನೆ ಸೇರಿದ್ದಾನೆ. ಅಷ್ಟಕ್ಕೂ ಮಾಡಲು ಹೋಗಿದ್ದ ರೀಲ್ಸ್ ಯಾವುದು? ಆಗಿದ್ದೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

ಹುಬ್ಬಳ್ಳಿ: ಆಡಿ ಕಾರು-ಬೈಕ್ ಸ್ಟಂಟ್ ರೀಲ್ಸ್ ಘೋರ ದುರಂತ, ಬಿಜೆಪಿ ಮುಖಂಡನ ಪುತ್ರ ಬಲಿ
ನಮೀಷ ಸಂಗಳದ
ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 19, 2026 | 9:36 PM

Share

ಹುಬ್ಬಳ್ಳಿ, (ಮಾರ್ಚ್ 19): ರೀಲ್ಸ್  (Reels) ಹುಚ್ಚಾಟಕ್ಕೆ ಬಿದ್ದು ಬಿಜೆಪಿ ಮುಖಂಡನ ಪುತ್ರ ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ  (Hubballi) ನಡೆದಿದೆ. ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ. ಇದರಿಂದ ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಛಾಯೆ ಆವರಿಸಿದೆ.

ಯುಗಾದಿ ಹಬ್ಬಕ್ಕೆಂದು ಊರಿಗೆ ಬಂದಿದ್ದ ನಮೀಷ ಸಂಗಳದ ರೀಲ್ಸ್ ಮಾಡಲೆಂದು ಗೆಳೆಯರೊಂದಿಗೆ ಸೇಜವಾಡಕ್ಕರ್ ಪ್ಲಾಟ್‌‌ಗೆ ತೆರಳಿದ್ದರು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್​ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್​​​ಗೆ ಗುದ್ದಿದೆ ಪರಿಣಾಮ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ ಸಾವನ್ನಪ್ಪಿದ್ದಾನೆ.

ಇದನ್ನೂ ನೋಡಿ: ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿರುವ ಅಪ್ತಾಪ್ತ‌ ಬಾಲಕನನ್ನು‌ ವಿಚಾರಣೆಗೊಳಪಡಿಸಿದ್ದಾರೆ.

ಯುಗಾದಿ ಹಬ್ಬಕ್ಕೆಂದು ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ದುರಂತ ಸಾವು ಕಂಡಿದ್ದು, ಎಲ್ಲರನ್ನೂ ದೃತಿಗೆಡಿಸಿದೆ. ಮಗನ ಅಕಾಲಿಕ ಮರಣದ ಸುದ್ದಿ ಕೇಳಿ ತಂದೆ ವೀರೇಶ ಸಂಗಳದ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Thu, 19 March 26

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್