ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ

ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ.

ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ
ಮೃತ ಪ್ರವೀಣ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 9:55 AM

ಧಾರವಾಡ: ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ. ಗ್ರಾಮ‌ ಪಂಚಾಯತ್ ಉಪಾಧ್ಯಕ್ಷ ಆಗಿರುವ ಪ್ರವೀಣ್​, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯ ಪ್ರಸಾದದ ವೇಳೆ ಕೆಲವರು ಕುಡಿದು ಜಗಳವಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ವೇಳೆ ಪ್ರವೀಣ್ ಜಗಳ ಬಿಡಿಸಿ ಕಳುಹಿಸಿದ್ದ. ​

ಆದರೆ ಜಗಳ ಮಾಡಿದ್ದ ಒಂದು ಗುಂಪಿನ ಕಡೆಯವರು ಪುನಃ ಜಗಳವಾಡಲು ಬಂದಿದ್ದಾರೆ. ಈ ವೇಳೆ ಪ್ರವೀಣ್​ಗೆ ಚಾಕು ಇರಿದಿದ್ದಾರೆ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್​ರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು(ಏ.19) ಬೆಳಗಿನ ಜಾವ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾನೆ. ಚಾಕು ಇರಿದಿದ್ದ ರಾಘವೇಂದ್ರ ಪಟಾತ್ ಸೇರಿದಂತೆ ನಾಲ್ಕು ಜನರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ಕತ್ತು ಹಿಸುಕಿ, ಮಾರಕಾಸ್ತ್ರದಿಂದ ಹೊಡೆದು ಯುವಕನ ಕೊಲೆ; ಮೂವರು ಆರೋಪಿಗಳನ್ನ ಬಂಧಿಸಿದ ಪೊಲೀಸರು

ಕೋಟೂರ ಗ್ರಾಪಂ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ

ಹೌದು ಪ್ರವೀಣ್ ಗ್ರಾಪಂ ಉಪಾಧ್ಯಕ್ಷ ಮಾತ್ರವಲ್ಲದೆ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ. ಈ ಹಿನ್ನಲೆ ಇದು ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿರುವ ಕಾರಣ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಕ್ಕೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವು

ತುಮಕೂರು: ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಓಬಳಾಪುರ ಟೋಲ್ ಬಳಿ ನಡೆದಿದೆ. ಮೋಹನ್ ಕುಮಾರ್(35) ಮೃತ ರ್ದುದೈವಿ. ತುಮಕೂರು ಕಡೆಯಿಂದ ಕೊರಟಗೆರೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೊರಟಗೆರೆಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ