ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ, ಆಮೇಲೇನಾಯ್ತು?

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂದು ಹಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಸಂತೋಷ್ ಕೊರಡಿ, ಸ್ಮಶಾನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ, ಆಮೇಲೇನಾಯ್ತು?
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
Follow us
TV9 Web
| Updated By: ಆಯೇಷಾ ಬಾನು

Updated on: Dec 31, 2022 | 12:30 PM

ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಯುವಕನೋರ್ವ ಸ್ಮಶಾನದಲ್ಲಿ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಮದುವೆ ವಯಸ್ಸು ಮೀರುತ್ತಿದ್ದರೂ ಹೆಣ್ಣು ಸಿಗಲಿಲ್ಲವೆಂದು ತೀವ್ರ ಬೇಸರಗೊಂಡಿದ್ದ ಸಂತೋಷ್​ ಕೊರಡಿ(30) ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದ್ದಾನೆ.

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗಲಿಲ್ಲ ಎಂದು ಹಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಸಂತೋಷ್ ಕೊರಡಿ, ಸ್ಮಶಾನದಲ್ಲಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಶೇ. 50ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಸಂತೋಷ್​ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಂಗಡಿ ತೆರವು ವಿರೋಧಿಸಿ ವಿಷಸೇವಿಸಿ ಮಾಲೀಕ ಆತ್ಮಹತ್ಯೆಗೆ ಯತ್ನ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯದಲ್ಲಿ ಅಂಗಡಿ ತೆರವು ವಿರೋಧಿಸಿ ವಿಷಸೇವಿಸಿ ಮಾಲೀಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗ್ರಾಮದ ರಂಗಸ್ವಾಮಿ ಎಂಬಾತ ರಸ್ತೆ ಒತ್ತುವರಿ ಮಾಡಿ ಅಂಗಡಿ ನಿರ್ಮಾಣ ಮಾಡಿದ್ದ. ಈ ಬಗ್ಗೆ ಗ್ರಾಮಸ್ಥರು ತಹಶೀಲ್ದಾರ್‌ಗೆ ದೂರು ನೀಡಿದ್ದರು. ಬಳಿಕ ಸರ್ವೆ ಅಧಿಕಾರಿಗಳು ಜಾಗ ಪರಿಶೀಲಿಸಿ ರಸ್ತೆ ಒತ್ತುವರಿ ಮಾಡಿರುವುದು ನಿಜ ಎಂದು ವರದಿ ನೀಡಿದ್ದರು. ಹೀಗಾಗಿ ಅಂಗಡಿ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಆದ್ರೆ ರಂಗಸ್ವಾಮಿ ಅಂಗಡಿ ತೆರವುಗೊಳಿಸಿಲ್ಲ. ಹೀಗಾಗಿ ನಿನ್ನೆ ಒತ್ತುವರಿ ತೆರವುಗೊಳಿಸಲು ತಹಶೀಲ್ದಾರ್ ಮಂಜುಳಾ ಮುಂದಾಗಿದ್ರು. ಈ ವೇಳೆ ರಂಗಸ್ವಾಮಿ ಕಾಲಾವಕಾಶ ಕೇಳಿದ್ರು. ಆದ್ರೆ ತಹಶೀಲ್ದಾರ್ ಮಂಜುಳಾ ಕಾಲಾವಕಾಶ ನೀಡಲು ನಿರಾಕರಿಸಿದ್ರು. ಈ ವೇಳೆ ಅಂಗಡಿಯಲ್ಲೇ ವಿಷ ಸೇವಿಸಿ ರಂಗಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕೂಡಲೇ ರಂಗಸ್ವಾಮಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಬಿಜೆಪಿ ಮಾಜಿ ಶಾಸಕರ ಮನೆ ಹಿಂದೆ ಮಹಿಳೆಯ ಕೊಳೆತ ಶವ ಪತ್ತೆ

ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾವು ಆರೋಪ, ಪ್ರತಿಭಟನೆ

ವೈದ್ಯರ ಎಡವಟ್ಟಿನಿಂದ ಯುವತಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಪರೇಷನ್ ಮಾಡಿದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾರೆ. ಯುವತಿ ಸಾವಿಗೆ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ರಾಯಚೂರು ರಿಮ್ಸ್ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಕಫ ಕಟ್ಟಿದ ವಿಚಾರಕ್ಕೆ ರಾಜೇಶ್ವರಿ(19) ಕಳೆದ ಮೂರು ದಿನಗಳ ಹಿಂದೆಯಷ್ಟೇ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಳು. ನಿನ್ನೆರಾತ್ರಿ ವೈದ್ಯರು ಯುವತಿ ರಾಜೇಶ್ವರಿ ಮೂಗಿನ ಆಪರೇಷನ್ ಮಾಡಿದ್ದಾರೆ. ಆಪರೇಷನ್ ಮಾಡಿದ ಕೆಲವೇ ಹೊತ್ತಲ್ಲಿ ರಾಜೇಶ್ವರಿ ಮೃತಪಟ್ಟಿದ್ದಾಳೆ. ಲೋ ಬಿಪಿಯಿಂದ ರಾಜೇಶ್ವರಿ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಆದ್ರೆ ಯುವತಿ ಸಾವಿಗೆ ವೈದ್ಯರೇ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ