AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ದೇವರ ದರ್ಶನಕ್ಕೆ ಹೊರಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು

ಕಾರಿಗೆ ಟ್ಯಾಂಕರ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ: ದೇವರ ದರ್ಶನಕ್ಕೆ ಹೊರಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು
ಪ್ರಾತಿನಿಧಿಕ ಚಿತ್ರImage Credit source: indianexpress.com
TV9 Web
| Updated By: ವಿವೇಕ ಬಿರಾದಾರ|

Updated on: Feb 07, 2023 | 7:11 PM

Share

ಹುಬ್ಬಳ್ಳಿ: ಕಾರಿಗೆ ಟ್ಯಾಂಕರ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತ ದುರ್ದೈವಿಗಳು. ಕಾರಿನಲ್ಲಿ 6 ಜನ ಸ್ನೇಹಿತರು ದೇವರ ದರ್ಶನಕ್ಕೆ ಕಾರವಾರಕ್ಕೆ ತೆರಳುತ್ತಿದ್ದರು. ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್‌ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ನೇಹಿತರು ಕಾರ್​ನಲ್ಲಿ ಪ್ರಯಾಣ ಮಾಡುವಾಗ ಪ್ರವಾಸಕ್ಕೆ ಹೊರಟಿರೋ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

ಬೆಂಗಳೂರು: ಸಾಫ್ಟ್​ವೇರ್ ಕಂಪನಿಯಲ್ಲಿ ಅಗ್ನಿ ಅವಘಡ

ಬೆಂಗಳೂರಿನ ಯಲಹಂಕ ಮುಖ್ಯರಸ್ತೆಯ ಸಾಫ್ಟ್​ವೇರ್ ಕಂಪನಿಯ ಕಟ್ಟಡದ 8ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಂಪನಿಯ 8 ಸಿಬ್ಬಂದಿ ಓಡಿ ಬಂದಿದ್ದಾರೆ. ಕೂಡಲೇ ಕಟ್ಟಡದಲ್ಲಿದ್ದವರನ್ನು ಎಚ್ಚರಿಸಿ ಹೊರಗಡೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾ‌‌ನಿ ಸಂಭವಿಸಿಲ್ಲ. 4 ಅಗ್ನಿಶಾಮಕ ವಾಹನ, ಲ್ಯಾಡರ್​​ನಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಅಗ್ನಿ ಅನಾಹುತ ಸಂಭವಿಸಿದ ಮಹಡಿಯಲ್ಲಿ 200 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಮಹಿಳೆ ಸಜೀವದಹನ

ಮಲ್ಲೇಶ್ವರಂನ ಬೆಂಗಳೂರಿನ ಮಂತ್ರಿಮಾಲ್‌ನ ಹಿಂಭಾಗದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವನ್ನಪ್ಪಿಸಿದ್ದಾರೆ. ಮೇರಿ(55) ಮೃತ ಮಹಿಳೆ. ಮನೆಯಲ್ಲಿದ್ದ ಮತ್ತೊಬ್ಬರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ