ಹುಬ್ಬಳ್ಳಿ: ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಮೃತ ದುರ್ದೈವಿಗಳು. ಕಾರಿನಲ್ಲಿ 6 ಜನ ಸ್ನೇಹಿತರು ದೇವರ ದರ್ಶನಕ್ಕೆ ಕಾರವಾರಕ್ಕೆ ತೆರಳುತ್ತಿದ್ದರು. ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ನೇಹಿತರು ಕಾರ್ನಲ್ಲಿ ಪ್ರಯಾಣ ಮಾಡುವಾಗ ಪ್ರವಾಸಕ್ಕೆ ಹೊರಟಿರೋ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.
ಬೆಂಗಳೂರಿನ ಯಲಹಂಕ ಮುಖ್ಯರಸ್ತೆಯ ಸಾಫ್ಟ್ವೇರ್ ಕಂಪನಿಯ ಕಟ್ಟಡದ 8ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಂಪನಿಯ 8 ಸಿಬ್ಬಂದಿ ಓಡಿ ಬಂದಿದ್ದಾರೆ. ಕೂಡಲೇ ಕಟ್ಟಡದಲ್ಲಿದ್ದವರನ್ನು ಎಚ್ಚರಿಸಿ ಹೊರಗಡೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 4 ಅಗ್ನಿಶಾಮಕ ವಾಹನ, ಲ್ಯಾಡರ್ನಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಅಗ್ನಿ ಅನಾಹುತ ಸಂಭವಿಸಿದ ಮಹಡಿಯಲ್ಲಿ 200 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು.
ಮಲ್ಲೇಶ್ವರಂನ ಬೆಂಗಳೂರಿನ ಮಂತ್ರಿಮಾಲ್‌ನ ಹಿಂಭಾಗದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಮಹಿಳೆ ಸಾವನ್ನಪ್ಪಿಸಿದ್ದಾರೆ. ಮೇರಿ(55) ಮೃತ ಮಹಿಳೆ. ಮನೆಯಲ್ಲಿದ್ದ ಮತ್ತೊಬ್ಬರಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.