ಹುಬ್ಬಳ್ಳಿ: ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಅಪಘಾತ: 8ಕ್ಕೂ ಹೆಚ್ಚು ಜನರಿಗೆ ಗಾಯ
ಌಂಬುಲೆನ್ಸ್ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ನಡೆದಿದೆ.
ಹುಬ್ಬಳ್ಳಿ: ಆ್ಯಂಬುಲೆನ್ಸ್ ಮತ್ತು ಟೆಂಪೋ ನಡುವೆ ಅಪಘಾತ (Accident) ಸಂಭವಿಸಿ ಆ್ಯಂಬುಲೆನ್ಸ್ (Ambulance) ಚಾಲಕ ಸೇರಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ (Hubli) ದೇಶಪಾಂಡೆ ನಗರದ ಬಳಿ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಭಕ್ತರು ಟೆಂಪೋ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ಪಡೆದು ರಾಣೆಬೆನ್ನೂರಿಗೆ ಹೊರಟಿದ್ದು, ಆ್ಯಂಬುಲೆನ್ಸ್ ಗದಗ ನಗರದಿಂದ ಹುಬ್ಬಳ್ಳಿಯ ಕಿಮ್ಸ್ಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಡಿವೈಡರ್ಗೆ ಕಾರು ಡಿಕ್ಕಿ ಇಬ್ಬರಿಗೆ ಗಾಯ
ಬೆಂಗಳೂರು: ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಹೆಬ್ಬಾಳ-ನಾಗವಾರ ಮುಖ್ಯರಸ್ತೆಯಲ್ಲಿ ನಡೆದಿದೆ. ಚಾಲಕ ಮದ್ಯ ಸೇವಿಸಿ ಕಾರು ಚಾಲನೆ ಮಾಡಿದ್ದರಿಂದ, ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಬ್ಬಾಳ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಘಟನೆ ನಡೆದಿದೆ.
ಭೀಕರ ರಸ್ತೆ ಅಪಘಾತಕ್ಕೆ ಗ್ರಾ.ಪಂ ಸದಸ್ಯ ದುರ್ಮರಣ
ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ಗ್ರಾ.ಪಂ ಸದಸ್ಯ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಟ್ಯಾರು ಎಂಬಲ್ಲಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ ಸದಸ್ಯ ಮುರಳಿ ಕೃಷ್ಣ ಭಟ್ (35) ಮೃತ ದುರ್ದೈವಿ. ಕಾರು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳಕ್ಕೆ ಉರುಳಿ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ. ಮುರಳಿ ನಿಡ್ಪಳ್ಳಿ ಬಜರಂಗದಳದ ಮಾಜಿ ಸಂಚಾಲಕ ಹಾಗೂ ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದರು.
ಫೋರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಕಾರಲ್ಲಿದ್ದ ಬೆಟ್ಟಂಪಾಡಿಯ ದಿಲೀಪ್ ಕುಮಾರ್, ಶಶಿಕುಮಾರ್, ನವನೀತ್ ಹಾಗೂ ಮುರಳಿ ಎಂಬವರಿಗೆ ಗಾಯಗಳಾಗಿವೆ. ಪುತ್ತೂರು ಡಿವೈಎಸ್ಪಿ ವೀರಯ್ಯ ಹೀರೆಮಠ್ ಅಪಘಾತದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:55 am, Wed, 15 February 23