ನ್ಯಾಷನಲ್ ಟ್ರಾವೆಲ್ಸ್ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: ಪ್ರೋಟೀನ್ ಪೌಡರ್ ಅತಿಯಾಗಿ ಬಳಸ್ತೀರಾ, ಈ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ
ತಾಯಿಯನ್ನು ಬಿಗಿದಿಪ್ಪಿ ಅಳುತ್ತಿರುವ ಕಂದಮ್ಮ:
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿಯನ್ನು ಬಿಗಿದಿಪ್ಪಿ ಕಂದಮ್ಮ ಅಳುತ್ತಿದೆ. ನಿನ್ನೆ ರಾತ್ರಿಯಿಂದ ಅನ್ನ, ನೀರಿಲ್ಲದೇ ಮಗು ಒಂದೇ ಸಮನೆ ಕಣ್ಣೀರು ಹಾಕುತ್ತಿದೆ. ಕಿಮ್ಸ್ ಸಿಬ್ಬಂದಿ ಮಗುವಿಗೆ ಚಾಕೋಲೆಟ್ ಕೊಟ್ಟು ಸಂತೈಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಸೂಚನೆ ಬಳಿಕ ತಾಯಿ ಎದೆಹಾಲು ಕುಡಿಸಿದ್ದಾರೆ.
ನಾಲ್ಕೈದು ಜನರ ಸ್ಥಿತಿ ಗಂಭೀರ:
ಅಪಘಾತನದ ಬಗ್ಗೆ ಮಾತನಾಡಿದ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ, ಗಾಯಗೊಂಡವರನ್ನು ಮಧ್ಯರಾತ್ರಿ ಕಿಮ್ಸ್ ಆಸ್ಪತ್ರೆಗೆ ಕರೆತಂದಿದ್ದರು. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು, ಆಸ್ಪತ್ರೆಯಲ್ಲಿ ಇಬ್ಬರ ಸಾವನ್ನಪ್ಪಿದ್ದಾರೆ. ನಾಲ್ಕೈದು ಜನರ ಸ್ಥಿತಿ ಗಂಭೀರವಾಗಿದೆ, ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಪಾಯದಿಂದ ಪಾರಾದ ಕೆಲವರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದರು.
ಅಪಘಾತಕ್ಕೆ ಕಾರಣವಾಯ್ತಾ ಬಸ್ ಚಾಲಕನ ಅಜಾಗೂರತೆ?
ಭೀಕರ ದುರಂತಕ್ಕೆ ಬಸ್ ಚಾಲಕನ ಅಜಾಗೂರತೆ ಕಾರಣ ಎಂದು ಹೇಳಲಾಗುತ್ತಿದೆ. ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬಸ್ ಚಾಲಕ ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಿದ್ದಾರಂತೆ. ರಸ್ತೆ ಕಿರಿದಾಗಿದ್ದರಿಂದ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ