ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿತ ಆರೋಪ: ಪೊಲೀಸ್ ಅಧಿಕಾರಿಗೆ ಬೆವರಿಳಿಸಿದ ಪ್ರಲ್ಹಾದ್ ಜೋಶಿ

ಸುಖಾಸುಮ್ಮನೆ ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಿದ ಆರೋಪ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಧಾರವಾಡದ ಶಹರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಅವರನ್ನು ಹುಬ್ಬಳ್ಳಿಯ ತಮ್ಮ ನಿವಾಸಕ್ಕೆ ಕರೆಸಿ ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಧಾರವಾಡದ ಗೊಲ್ಲರ ಓಣಿ ನಿವಾಸಿ ರವಿ ಗೊಲ್ಲರ ಎಂಬ ಕಟ್ಟರ್ ಬಿಜೆಪಿ ಕಾರ್ಯಕರ್ತನಿಗೆ ಥಳಿಸಿದ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿ, ನ.12: ಸುಖಾಸುಮ್ಮನೆ ಠಾಣೆಗೆ ಕರೆಸಿ ಬಿಜೆಪಿ ಕಾರ್ಯಕರ್ತರಿಗೆ ಥಳಿಸಿದ ಆರೋಪ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಧಾರವಾಡದ ಶಹರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಕಾಡದೇವರಮಠ ಅವರನ್ನು ಹುಬ್ಬಳ್ಳಿಯ ತಮ್ಮ ನಿವಾಸಕ್ಕೆ ಕರೆಸಿ ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಧಾರವಾಡದ ಗೊಲ್ಲರ ಓಣಿ ನಿವಾಸಿ ರವಿ ಗೊಲ್ಲರ ಎಂಬ ಕಟ್ಟರ್ ಬಿಜೆಪಿ ಕಾರ್ಯಕರ್ತನಿಗೆ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಕೆಲವರ ಮಾತು ಕೇಳಿಕೊಂಡು ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಲಾಗುತ್ತಿದೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ 3 ವರ್ಷ ಮಾತ್ರ ಅಧ್ಯಕ್ಷ: ಪ್ರಹ್ಲಾದ್​ ಜೋಶಿ ಸ್ಪಷ್ಟನೆ

ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿಯಾದ ಕಾರ್ಯಕರ್ತರು, ಸುಖಾ ಸುಮ್ಮನೆ ಠಾಣೆಗೆ ಕರೆಸಿ, ಇಲ್ಲ ಸಲ್ಲದ ಆರೋಪ ಹೊರಿಸಿ ಮನಬಂದಂತೆ ಥಳಿಸಿದ್ದಾರೆಂದು ಅಳಲು ತೋಡಿಕೊಂಡಿದ್ದಾರೆ. ಅದರಂತೆ ಶಹರ ಠಾಣೆಯ ಇನ್ಸ್​​ಪೆಕ್ಟರ್ ಕಾಡದೇವರಮಠ ಅವರನ್ನು ಕರೆಸಿ ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು.

ಠಾಣೆಗೆ ಕರೆಸಿ ಥಳಿಸಲು ನಿಮಗೇನು ಅಧಿಕಾರ ಇದೆ ಎಂದು ಇನ್​​ಸ್ಪೆಕ್ಟರ್​​ ಅವರ ವಿರುದ್ಧ ಗುಡುಗಿದ ಜೋಶಿ, ತಪ್ಪು ಮಾಡಿದ್ದರೆ ಶಿಕ್ಷೆ ನೀಡಿ.‌ ಅನವಶ್ಯಕಚಾಗಿ ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us