ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

| Updated By: guruganesh bhat

Updated on: Aug 16, 2021 | 3:46 PM

ಕೊವಿಡ್ ಸೋಂಕಿನ ಹೆಚ್ಚಳದಿಂದ ತರಗತಿಗಳು ನಡೆಯದ ಕಾರಣ 5 ವಿದ್ಯಾರ್ಥಿಗಳು ಮರಳಿ ಅಪ್ಘಾನಿಸ್ತಾನಕ್ಕೆ ತೆರಳಿದ್ದರು. ಉಳಿದ 10 ವಿದ್ಯಾರ್ಥಿಗಳು ಧಾರವಾಡ ಕೃಷಿ ವಿವಿ ಹಾಸ್ಟೆಲ್ನಲ್ಲಿಯೇ ತಂಗಿದ್ದರು.

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು
ಧಾರವಾಡದಲ್ಲಿರುವ ಅಪ್ಘಾನಿಸ್ತಾನ ಮೂಲದ ವಿದ್ಯಾರ್ಥಿಗಳು
Follow us on

ಧಾರವಾಡ: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರ ಸಂಘಟನೆ ವಶಕ್ಕೆ ಪಡೆದಿರುವುದು ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ಘಾನಿಸ್ತಾನದ ವಿದ್ಯಾರ್ಥಿಗಳ ಕಣ್ಣೀರಿಗೆ ಕಾರಣವಾಗಿದೆ. ಭಾರತಕ್ಕೂ ಆಪ್ಘನ್​ನ ಹಲವು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಆಗಮಿಸಿದ್ದು, ಅವರ ಪೈಕಿ ವಿದ್ಯಾಕಾಶಿ ಧಾರವಾಡದಲ್ಲಿ 15 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಹಾಗೂ ಸ್ನಾತಕೋತ್ತರ ಪದವಿ ಓದಲು ಬಂದಿರುವ ವಿದ್ಯಾರ್ಥಿಗಳು ಇವರಾಗಿದ್ದು ತಮ್ಮ ತಾಯ್ನಾಡಿಗೆ ಒದಗಿದ ದುಸ್ಥಿತಿ ನೆನೆದು ಕಂಬನಿ ಸುರಿಸುತ್ತಿದ್ದಾರೆ. ಕೊವಿಡ್ ಸೋಂಕಿನ ಹೆಚ್ಚಳದಿಂದ ತರಗತಿಗಳು ನಡೆಯದ ಕಾರಣ 5 ವಿದ್ಯಾರ್ಥಿಗಳು ಮರಳಿ ಅಪ್ಘಾನಿಸ್ತಾನಕ್ಕೆ ತೆರಳಿದ್ದರು. ಉಳಿದ 10 ವಿದ್ಯಾರ್ಥಿಗಳು ಧಾರವಾಡ ಕೃಷಿ ವಿವಿ ಹಾಸ್ಟೆಲ್ನಲ್ಲಿಯೇ ತಂಗಿದ್ದರು.

ಕುಟುಂಬದ ಜೊತೆ ಮಾತನಾಡಿದ್ದೇವೆ. ಅವರು ಸುರಕ್ಷಿತವಾಗಿರೋದಾಗಿ ಹೇಳಿದ್ದಾರೆ. ತಾಲಿಬಾನ್ ಯಾರಿಗೂ ಏನೂ ಮಾಡಲ್ಲ ಎಂದು ಘೋಷಿಸಿದೆ. ಹೀಗಾಗಿ ನಾವು ಸ್ವಲ್ಪ ನಿರಾಳವಾಗಿದ್ದೇವೆ. ವಾಪಸ್ ಹೋದ 5 ವಿದ್ಯಾರ್ಥಿಗಳು ಭಾರತಕ್ಕೆ ಮರಳುವುದು ಕಷ್ಟ. ಸದ್ಯ ವಿಮಾನ ಸಂಚಾರ ಬಂದ್ ಆಗಿವೆ. ತುಂಬಾ ಭಯವಾಗುತ್ತಿದೆ ಎಂದು ವಿದ್ಯಾರ್ಥಿಗಳು ಟಿವಿ 9 ಕನ್ನಡದ ಬಳಿ ಅಳಲು ತೋಡಿಕೊಡರು.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ತಾಲಿಬಾನ್ ವಶಕ್ಕೆ ಒಳಪಟ್ಟಿದ್ದರಿಂದ ರಕ್ತಪಾತವನ್ನು ತಡೆಯುವ ಸಲುವಾಗಿ ಅಫ್ಘಾನಿಸ್ತಾನವನ್ನು ತೊರೆದಿದ್ದಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಹೇಳಿದ್ದಾರೆ. ಅಫ್ಘಾನಿಸ್ತಾನದಿಂದ ಪಲಾಯನವಾದ ಬಳಿಕ ಫೇಸ್​ಬುಕ್​ನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಶ್ರಫ್ ಘನಿ, ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವ ಮತ್ತು ಸಂಪತ್ತಿನ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಹೇಳಿದ್ದಾರೆ. ಈಗ ಅವರು ದೇಶದ ಜನರ ಗೌರವ, ಸಂಪತ್ತು ಮತ್ತು ಸ್ವಾಭಿಮಾನವನ್ನು ರಕ್ಷಿಸುವ ಹೊಣೆ ಹೊತ್ತಿದ್ದಾರೆ. ಒಂದು ವೇಳೆ ನಾನು ದೇಶ ತೊರೆಯದಿದ್ದರೆ 6 ಮಿಲಿಯನ್ ಜನರ ಪ್ರಾಣಕ್ಕೆ ಸಂಚಕಾರ ಎದುರಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ; ಕಾಬೂಲ್ ವಿಮಾನ ನಿಲ್ದಾಣದಲ್ಲಿ 5 ಜನರ ಹತ್ಯೆ
ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗುತ್ತಿದ್ದಂತೆ ಸಾಕಷ್ಟು ಜನರು ದೇಶ ತೊರೆಯಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಜನಸಾಗರವೇ ಹರಿದುಬರುತ್ತಿದೆ. ಈಗಾಗಲೇ ಅಫ್ಘಾನಿಸ್ಥಾನದಲ್ಲಿದ್ದ ಭಾರತದ ಅಧಿಕಾರಿಗಳನ್ನು ಏರ್​ಲಿಫ್ಟ್​ ಮೂಲಕ ಭಾರತಕ್ಕೆ ಕರೆತರಲಾಗಿದೆ. ಹಾಗೇ, ಬೇರೆ ದೇಶಗಳಿಂದಲೂ ಅಫ್ಘಾನಿಸ್ತಾನದಲ್ಲಿ ವಾಸವಾಗಿರುವ ತಮ್ಮ ದೇಶದ ಜನರನ್ನು ಕರೆಸಿಕೊಳ್ಳಲಾಗುತ್ತಿದೆ. ಒಂದೇ ದಿನಕ್ಕೆ ಅಫ್ಘಾನ್​ನಿಂದ 1,500ಕ್ಕೂ ಹೆಚ್ಚು ಜನರು ಬೇರೆ ದೇಶಗಳಿಗೆ ತೆರಳುತ್ತಿದ್ದಾರೆ. ಈ ನಡುವೆ ಕಾಬೂಲ್ ವಿಮಾನದಲ್ಲಿ ಉಂಟಾದ ಗಲಾಟೆ, ಗುಂಡಿನ ದಾಳಿಯಲ್ಲಿ 5ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಅಫ್ಘಾನ್​ನಿಂದ ತಮ್ಮ ದೇಶಕ್ಕೆ ತೆರಳಲು ನೂರಾರು ಜನರು ಒಂದೇ ಬಾರಿಗೆ ವಿಮಾನ ಹತ್ತಲು ನುಗ್ಗತೊಡಗಿದ್ದಾರೆ. ಇದರಿಂದ ನೂಕುನುಗ್ಗಲಾಗಿ, ಕಾಲ್ತುಳಿತ, ಎಳೆದಾಟ ನಡೆದಿದ್ದು, ಗುಂಡಿನ ದಾಳಿಯೂ ನಡೆದಿದೆ. ಈ ಗಲಾಟೆಯಲ್ಲಿ 5ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕೆಲವು ದೇಶಗಳು ತಮ್ಮ ಪ್ರಜೆಗಳನ್ನು ಏರ್​ಲಿಫ್ಟ್​ ಮಾಡಿ ಕರೆಸಿಕೊಳ್ಳುತ್ತಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಂಟಾಗಿರುವ ಗಲಾಟೆಯ ವಿಡಿಯೋಗಳು ವೈರಲ್ ಆಗಿವೆ. ಜರ್ಮನಿ, ರಷ್ಯಾ ಸೇರಿದಂತೆ ಅನೇಕ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಕರೆಸಿಕೊಳ್ಳಲು ವಿಶೇಷ ವಿಮಾನದ ವ್ಯವಸ್ಥೆ ಮಾಡುತ್ತಿವೆ.

ಇದನ್ನೂ ಓದಿ: 

Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ

ಪ್ರಾಣ ಉಳಿಸಿಕೊಳ್ಳಲು ಅಫ್ಘಾನಿಸ್ತಾನದ ರಸ್ತೆಗಳಲ್ಲಿ ಭಯದಿಂದ ಓಡಿದ ನಿರ್ದೇಶಕಿ; ವಿಡಿಯೋ ವೈರಲ್​  

(Afghanistan crisis Students from Afghan is in Dharwad tears of remembering the family and homeland)

Published On - 3:34 pm, Mon, 16 August 21