ಧಾರವಾಡ: ಕುದುರೆ ವ್ಯಾಪಾರ ಮಾಡಿ ಬಿಜೆಪಿಯವರು ಚುನಾವಣೆ ಮಾಡ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ರೆ ರಾಜೀನಾಮೆ ನೀಡಬೇಕಾಗುತ್ತೆ. ಒಂದು ವೇಳೆ ಬಿಜೆಪಿ ಸೋತು ಅತಂತ್ರವಾದರೂ ಜೆಡಿಎಸ್ ಸಪೋರ್ಟ್ ಮಾಡಲ್ಲ. ಯಾಕೆಂದ್ರೆ ನಾನು ಜೆಡಿಎಸ್ನಲ್ಲೇ ಇದ್ದು ಬಂದವನು. ಹೀಗಾಗಿ ನನಗೆ ಚೆನ್ನಾಗಿ ಗೊತ್ತಿದೆ ಎಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಪಚುನಾವಣೆಯ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಚಲಿತರಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಧ್ಯಂತರ ಚುನಾವಣೆ ಆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ:
ಮಧ್ಯಂತರ ಚುನಾವಣೆ ಆದ್ರೆ 100ಕ್ಕೆ 100ರಷ್ಟು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ನಾನು ಸಿಎಂ ಆಗೋದು ಬಿಡೋದು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನೀಗಾಗಲೇ 5 ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೇನೆ. ಡಿ.3ರೊಳಗೆ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತೇನೆ ಎಂದರು.
Published On - 11:59 am, Mon, 25 November 19