AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಹುಬ್ಬಳ್ಳಿಯ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ

ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸುತ್ತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನರಿಗೆ ಅನ್ನ ಹಾಕ್ತಿದ್ದಿಯಲ್ಲೋ ಯಪ್ಪಾ ಅಂತಾ ಮಹಿಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲಿದೀಯಪ್ಪಾ ನೀನು ಅಂತಾ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. 

ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಹುಬ್ಬಳ್ಳಿಯ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
TV9 Web
| Edited By: |

Updated on:Jul 06, 2022 | 3:03 PM

Share

ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ್‌ ಗುರೂಜಿಯನ್ನು (Chandrashekhar Guruji Murder) ಚಾಕುವಿನಿಂದ ಇರಿದು ಮಂಗಳವಾರ (ಜುಲೈ 5) ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಹೊಟೆಲ್​ನಲ್ಲಿ ಘಟನೆ ನಡೆದಿದೆ. ಇಂದು (ಜುಲೈ 7) ನಗರದ ಸುಳ್ಳಾ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ದರ್ಶನದ ಬಳಿಕ ವೀರಶೈವ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಶವಾಗಾರದಿಂದ ಸುಳ್ಳಾ ಗ್ರಾಮದತ್ತ ಗೂರುಜಿ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಸುಳ್ಳಾ ಗ್ರಾಮದ ಕಡೆ ಮೃತ ದೇಹ ರವಾನೆಯಾಗಲಿದೆ. ಶವಾಗಾರದ ಬಳಿ ಪೂಜೆಗೆ ಅರ್ಚಕರು ಸಿದ್ದತೆ ಮಾಡಿಕೊಂಡಿದ್ದು, ಪೂಜೆ ಮಾಡಿದ ಬಳಿಕ ಪಾರ್ಥಿವ ಶರೀರ ವಾಹನದಲ್ಲಿ ಸುಳ್ಳಾ ಗ್ರಾಮಕ್ಕೆ ರವಾನೆ ಮಾಡಲಿದ್ದಾರೆ. ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸುತ್ತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನರಿಗೆ ಅನ್ನ ಹಾಕ್ತಿದ್ದಿಯಲ್ಲೋ ಯಪ್ಪಾ ಅಂತಾ ಮಹಿಳೆ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲಿದೀಯಪ್ಪಾ ನೀನು ಅಂತಾ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Team Building: ಎಲ್ಲ ಸಿಬ್ಬಂದಿಯನ್ನು ಖರ್ಚಿಲ್ಲದೆ ಎರಡು ವಾರಗಳ ಕಾಲ ಬಾಲಿ ಪ್ರವಾಸಕ್ಕೆ ಒಯ್ದ ಈ ಕಂಪೆನಿ ಬಗ್ಗೆಯೇ ಎಲ್ಲೆಲ್ಲೂ ಸುದ್ದಿ

ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಗುರೂಜಿ ಮರಣೋತ್ತರ ಪರೀಕ್ಷೆ ಮಾಡಿದ್ದು, ಚಂದ್ರಶೇಖರ ಗುರೂಜಿಯ ಕುತ್ತಿಗೆಗೆ 2-3 ಇಂಚಿನಷ್ಟು ಚಾಕುವಿನಿಂದ ಇರಿಯಲಾಗಿದೆ. ದೇಹದಲ್ಲಿ 42 ಕಡೆ ಚಾಕುವಿನಿಂದ ಇರಿದ ಗಾಯಗಳು ಪತ್ತೆಯಾಗಿವೆ. ಕುತ್ತಿಗೆ ಭಾಗದಲ್ಲಿ ಎರಡು ಕಡೆ ಇರಿದಿದ್ದರಿಂದ ಹೆಚ್ಚು ರಕ್ತಸ್ರಾವವಾಗಿದೆ. ಸಹೋದರನ ನೆನೆದು ನಿರಂತರವಾಗಿ ಅಕ್ಕ ಶಾಂತಾ ಕಣ್ಣೀರಿಡುತ್ತಿದ್ದಾರೆ. ಅವರೊಂದಿಗೆ ಒಡನಾಟ ನೆನೆದು ಅಕ್ಕ ಶಾಂತಾ ಗೋಳಾಡುತ್ತಿದ್ದಾರೆ.

ಇದನ್ನೂ ಓದಿ: ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!

Published On - 3:01 pm, Wed, 6 July 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!