ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ;ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್
ನಗರದ ಬಟರ್ ಮಾರ್ಕೆಟ್, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪಾರಸ್ಥರಿಗೆ ಹೆದರಿಸಿ 2 ಲಕ್ಷದಿಂದ 3 ಲಕ್ಷ ರೂ ಹಣ ವಸೂಲಿ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಪಟ್ಟಂತೆ ಕರವೇ(Karave) ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿ(Hubballi)ಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಹುಬ್ಬಳ್ಳಿ, ನ.04: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ ಕೇಳಿಬಂದಿದ್ದು, ಕರವೇ(Karave) ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿ(Hubballi)ಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಬೆದರಿಕೆ ಹಾಕಿರುವ ಆರೋಪದ ಹಿನ್ನಲೆ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.
ವ್ಯಾಪರಸ್ಥರಿಗೆ ಹೆದರಿಸಿ ಹಣಕ್ಕೆ ಭೇಡಿಕೆ
ಹೌದು, ನಗರದ ಬಟರ್ ಮಾರ್ಕೆಟ್, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪಾರಸ್ಥರಿಗೆ ಹೆದರಿಸಿ 2 ಲಕ್ಷದಿಂದ 3 ಲಕ್ಷ ರೂ ಹಣ ವಸೂಲಿ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಅಕ್ಟೋಬರ್ 26ರಂದು ಉಳ್ಳಾಗಡ್ಡಿ ಮಠದ ಬಳಿಯ ನಿಖಿತಾ ಪ್ಲಾಸ್ಟಿಕ್ ಅಂಗಡಿ ಬಳಿ ವಿಜಯ ಅವರನ್ನು ಕರೆಸಿಕೊಂಡು ರಾಜ್ಯೋತ್ಸವಕ್ಕೆ 2 ಲಕ್ಷ ಕೊಡಬೇಕು. ಜೊತೆಗೆ ಪ್ರತಿ ಮೂರು ತಿಂಗಳಿಗೆ ನೀಡಬೇಕಾದ 1.70 ಲಕ್ಷ ರೂ ಹಣವನ್ನು ಕಡ್ಡಾಯವಾಗಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಮಂಜುನಾಥ್ ಲೂತಿಮಠ, ರಾಹುಲ್, ಅಮಿತ್, ಪ್ರವೀಣ, ಬಸವರಾಜ, ಬಾಲು, ಪ್ರಕಾಶ್ ಮತ್ತು ವಿಜಯ ಅವರ ಹೆಸರನ್ನು ಸೇರಿಸಲಾಗಿದೆ.
ಇದನ್ನೂ ಓದಿ:ಜಮೀನು ಗಲಾಟೆ: ಸತೀಶ್ ಜಾರಕಿಹೊಳಿ ಆಪ್ತನಿಗೆ ಗದಗ ಪಿಎಸ್ಐನಿಂದ ಬೆದರಿಕೆ ಆರೋಪ
ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ವಾಹನ ವಶಪಡಿಸಿಕೊಂಡ ಅಧಿಕಾರಿಗಳು
ಶಿವಮೊಗ್ಗ: ಗಣಿ ಮತ್ತು ಭೂ ಇಲಾಖೆ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಅನಂತಪುರ ಹೋಬಳಿಯ ಜಂಬಾನಿ, ಚೆನ್ನಶೆಟ್ಟಿಕೊಪ್ಪ ಬಳಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಯಾಗಿರುವ ಅವಿನಾಶ್ ಮೇಲೆ ಸ್ಥಳೀಯರು ಹಾಗೂ ಕಲ್ಲು ಕ್ವಾರಿಯ ಕಾರ್ಮಿಕರು ಹಲ್ಲೆಗೆ ಯತ್ನಿಸಿದ್ದಾರೆ. ಈ ಹಿನ್ನಲೆ ಜಂಬಿಟ್ಟಿಗೆ ಕ್ವಾರೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು, ಎರಡು ಲಾರಿ,ಒಂದು ಟ್ರ್ಯಾಕ್ಟರ್ ವಶಪಡಿಸಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:53 pm, Sat, 4 November 23