ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ

ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ
ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ
Follow us
TV9 Web
| Updated By: preethi shettigar

Updated on:Oct 12, 2021 | 10:50 AM

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ.

ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಮತಾಂತರಕ್ಕೆ ಸಂಬಂಧಪಟ್ಟಂತೆ ಅನೇಕ ಆರೋಪಗಳು ಕೇಳಿ ಬಂದಿವೆ.

ಚಿತ್ರದುರ್ಗ:ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ ಇತ್ತೀಚೆಗೆ ರಾಜ್ಯದ ಹಲವೆಡೆ ಮತಾಂತರದ ಆರೋಪ ಕೇಳಿಬರುತ್ತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಲವಂತವಾಗಿ ಮತಾಂತರ ಮಾಡಿ‌ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯ ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅಕ್ಟೋಬರ್ 1  ರಂದು ಚಿತ್ರದುರ್ಗದಲ್ಲಿಯೂ ಮತಾಂತರದ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಮುಖ್ಯ ಕಾರಣ ಚಿತ್ರದುರ್ಗ ಜಿಲ್ಲೆಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆದಿರುವ ಬಗ್ಗೆ ಶಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆರೋಪಿಸಿರುವುದೇ ಆಗಿದೆ.

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಮತಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ಶಾಸಕ ಗೂಳಿಹಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಮತಾಂತರ ಆರೋಪಿಸಿ ರೂರ್ಕಿ ಚರ್ಚ್ ಮೇಲೆ ದಾಳಿ: 200 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಉತ್ತರಾಖಂಡ್ ಪೊಲೀಸರು

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ

Published On - 10:47 am, Tue, 12 October 21

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್