ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಆಗ್ರಹ: ಆಯುಕ್ತರ ಜೊತೆ ಚರ್ಚಿಸಿ ನಿರ್ಧರಿಸುವೆ – ಹು-ಧಾ ಪಾಲಿಕೆ ಮೇಯರ್​

ಹುಬ್ಬಳ್ಳಿಯ ಈದ್ಗಾ ಮೈದಾನ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ ಕಾರ್ಯಕರ್ತರು ಮತ್ತು ಸಮತಾ ಸೈನಿಕದಳ ಸಂಘಟನೆ ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್​​​​​ ಈರೇಶ್ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಿದರು.

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಆಗ್ರಹ: ಆಯುಕ್ತರ ಜೊತೆ ಚರ್ಚಿಸಿ ನಿರ್ಧರಿಸುವೆ - ಹು-ಧಾ ಪಾಲಿಕೆ ಮೇಯರ್​
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 07, 2022 | 3:38 PM

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ (Hubli Idgah Maidan) (ಕಿತ್ತೂರು ರಾಣಿ ಚೆನ್ನಮ್ಮಾ) ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಎಐಎಂಎಂ (AIMM) ಕಾರ್ಯಕರ್ತರು ಮತ್ತು ಸಮತಾ ಸೈನಿಕದಳ ಸಂಘಟನೆ ಇಂದು (ನ. 7) ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation) ಮೇಯರ್​​​​​ ಈರೇಶ್ ಅಂಚಟಗೇರಿ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಮೇಯರ್​​​​​ ಈರೇಶ್ ಅಂಚಟಗೇರಿಗೆ ಗಣೇಶನಿಗೂ, ಟಿಪ್ಪುಗೂ ಹೋಲಿಕೆ ಬೇಡ. ಈ ಬಗ್ಗೆ ಆಯುಕ್ತರ ಜತೆ ಚರ್ಚಿಸುವೆ ಎಂದು ಹೇಳಿದರು.

AIMIM ಹಾಗೂ ಸಮತಾ ಸೈನಿಕದಳ ಸಂಘಟಕರು ಮೇಯರ್ ಈರೇಶ್ ಅಂಚಟಗೇರಿ ಅವರಿಗೆ ಭೇಟಿ ಮಾಡಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಗಣೇಶೋತ್ಸವ ಆಚರಣೆಗೆ ಅವಕಾಶ ಕೊಟ್ಟಿದ್ದೀರಿ, ಈಗ ನಮಗೂ ಅವಕಾಶ ಕೊಡಿ ಎಂದು ಸಂಘಟಕರು ಆಗ್ರಹಿಸಿದರು.

ಗಣೇಶೋತ್ಸವಕ್ಕೆ ಮೂರು ದಿನ ಕೊಟ್ಟಿದ್ದೀರಿ, ನಮಗೆ ಒಂದು ಗಂಟೆ ಅವಕಾಶ ಕೊಡಿ. ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್,​ ಗಣೇಶನಿಗೂ ಟಿಪ್ಪುಗೂ ಹೋಲಿಕೆ ಮಾಡಬೇಡಿ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರವಾಗಿ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಗಣೇಶ ಉತ್ಸವದ ಬಗ್ಗೆಯೂ ಅವರೇ ನಿರ್ಧಾರ ತೆಗೆದುಕೊಂಡಿದ್ದರು. ಎಲ್ಲರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಇದರಲ್ಲಿ ವೈಯಕ್ತಿಕ ನಿರ್ಧಾರ ಬರಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬಿಜೆಪಿಯ ಯಶಸ್ಸಿನಿಂದ ಕಾಂಗ್ರೆಸ್ ಭಯಭೀತವಾಗಿದೆ

ಕಾಂಗ್ರೆಸ್​​ನ ಜೋಡೋ ಯಾತ್ರೆ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಆದರೆ ಬಿಜೆಪಿಯ ಯಶಸ್ಸಿನಿಂದ ಕಾಂಗ್ರೆಸ್ ಭಯಭೀತವಾಗಿದೆ. ಹೀಗಾಗಿ ಬೀದಿಗೆ ಬಂದು ರಾಹುಲ್ ಗಾಂಧಿಯಿಂದ ಪಾದಯಾತ್ರೆ ಮಾಡಿಸಿದರು. ಸೋಲಾರ್ ಹಗರಣದ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದು ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Mon, 7 November 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ