ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅನುಮತಿ ನೀಡಿ: ಮೇಯರ್ಗೆ ಎಐಎಂಐಎಂನಿಂದ ಮನವಿ
ಟಿಪ್ಪು ಜಯಂತಿಗೆ ಅನುಮತಿ ನೀಡಿಬೇಕೆಂದು ಎಐಎಂಐಎಂ ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರಿಂದ ಮನವಿ
ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನ (ರಾಣಿ ಚೆನ್ನಮ್ಮಾ ಮೈದಾನ) ದಲ್ಲಿ ಗಣೇಶೋತ್ಸವ ಆಚರಣೆಗೆ ಸಾಕಷ್ಟು ಅಡಚಣೆಗಳ ನಂತರ ಗಣೇಶೋತ್ಸವ ಆಚರಿಸಲಾಗಿದೆ. ಈಗ ಇದೇ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅನುಮತಿ ನೀಡಬೇಕೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್’ (All India Majlis-e-Ittehadul Muslimeen AIMIM) ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿತ್ತು. ಇದೀಗ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಮೈದಾನಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಎಐಎಂಐಎಂ ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಪರ ಜೈ ಘೋಷಣೆ ಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:20 pm, Sat, 5 November 22