ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್​​​​​: ಸಂತೋಷ್​ ಲಾಡ್​​

ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್​ ಲಾಡ್​ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ವರ್ಣಗಳಿದ್ದವು, ಅಂಬೇಡ್ಕರ್ ಒಂದು ಮಾಡಿದರು. ನಾವು ಇವಾಗ ಬಳಸುತ್ತಿರುವ ಹಿಂದೂ ಪದ ಮೊದಲು ಇರಲಿಲ್ಲ. ಜನಾಂಗದ ಆಧಾರದ ಮೇಲೆ ಎಲ್ಲರನ್ನೂ ಕರೆಯುತ್ತಿದ್ದರು. ಹೀಗಾಗಿ ಹಿಂದೂ ಸಮಾಜವನ್ನು ಒಂದು ಮಾಡಿದ್ದು ಬಿ.ಆರ್.ಅಂಬೇಡ್ಕರ್ ಎಂದರು.

ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್​​​​​: ಸಂತೋಷ್​ ಲಾಡ್​​
ಸಂತೋಷ್​ ಲಾಡ್​
Follow us
| Updated By: ವಿವೇಕ ಬಿರಾದಾರ

Updated on: Jan 26, 2024 | 9:51 AM

ಹುಬ್ಬಳ್ಳಿ, ಜನವರಿ 26: ಹಿಂದೂ (Hindu) ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ವರ್ಣಗಳಿದ್ದವು, ಅಂಬೇಡ್ಕರ್ ಒಂದು ಮಾಡಿದರು. ನಾವು ಇವಾಗ ಬಳಸುತ್ತಿರುವ ಹಿಂದೂ ಪದ ಮೊದಲು ಇರಲಿಲ್ಲ. ಜನಾಂಗದ ಆಧಾರದ ಮೇಲೆ ಎಲ್ಲರನ್ನೂ ಕರೆಯುತ್ತಿದ್ದರು. ಹೀಗಾಗಿ ಹಿಂದೂ ಸಮಾಜವನ್ನು ಒಂದು ಮಾಡಿದ್ದು ಬಿ.ಆರ್.ಅಂಬೇಡ್ಕರ್ ಎಂದರು.

ನಾವು ಇಂದು ಅವರನ್ನು ದೇವರು ಅಂದುಕೊಳ್ಳುವ ಕಾಲ ಬಂದಿದೆ. ಹೆಣ್ಣುಮಕ್ಕಳಿಗೆ ಕಾನೂನಿನ ರಕ್ಷಣೆ ಬಗ್ಗೆ ಯಾರೊಬ್ಬರೂ ಚಿಂತಿಸಿರಲಿಲ್ಲ. ಡಾ.ಅಂಬೇಡ್ಕರ್ ಹೆಣ್ಣುಮಕ್ಕಳಿಗೆ ಆಸ್ತಿ ಹಕ್ಕು ಸಿಗುವಂತೆ ಮಾಡಿದರು. ಪ್ರತಿಯೊಬ್ಬ ಹೆಣ್ಣುಮಗಳು ಕೂಡ ಅಂಬೇಡ್ಕರ್ ಅವರಿ​​ಗೆ ಕೈಮುಗಿಯಬೇಕು. ಆ ಸಮಯದಲ್ಲಿ ಅಂಬೇಡ್ಕರ್​ ಅವರಿಗೆ ನೋವು ಕೊಟ್ಟ ಉದಾಹರಣೆಯಿದೆ. ಡಾ.ಅಂಬೇಡ್ಕರ್ ಅಂದ್ರೆ ಕೇವಲ ಎಸ್​ಸಿ, ಎಸ್​ಟಿಗೆ ಮಾತ್ರ ಸೀಮಿತವಲ್ಲ. ಸರ್ವಜನಾಂಗದ ಒಳಿತಿಗಾಗಿ ಅಂಬೇಡ್ಕರ್ ತಮ್ಮ ಜೀವವನ್ನೇ ಸವೆಸಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ: ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಖುಷಿಯಾಗಿದೆ: ಸಚಿವ ಸಂತೋಷ್ ಲಾಡ್

ಸಂವಿಧಾನ ಜಾಗೃತಿ

ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಯುವ ಉದ್ದೇಶದಿಂದ ಜಾಗೃತಿ ಜಾಥ ನಡೆಯಲಿದೆ. ಎಲ್ಲಾ ಗ್ರಾಮ ಪಂಚಾಯಿಗಳಲ್ಲಿ ಸಂಚರಿಸಲಿದೆ.

ಸಂವಿಧಾನ ಜಾಗೃತಿ ಜಾಥಾದಲ್ಲಿ ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನಗಳನ್ನು ನೀಡಲಾಗುತ್ತದೆ. ಜಾಥದಲ್ಲಿ ಸಂಚರಿಸಲಿರುವ ಎಲ್‌ಇಡಿ ವಾಹನಗಳ ಮೂಲಕ ವಿಡಿಯೊ ಪ್ರದರ್ಶನ ಇರಲಿದ್ದು, ನಮ್ಮ ಪರಂಪರೆಯನ್ನು ಅನಾವರಣಗೊಳಿಸಲಾಗುತ್ತದೆ.

ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ತಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಜಿಸಿವೆ. ರಾಜ್ಯದ 7 ಜಿಲ್ಲೆಗಳ 10 ಸ್ಥಳಗಳಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ