AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ
ಅಮೆರಿಕನ್​ ಡೈಮಂಡ್​ ಗಣಪತಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Sep 16, 2023 | 12:24 PM

ಹುಬ್ಬಳ್ಳಿ ಸೆ.16: ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು 12 ಲಕ್ಷ ರೂ. ಮೌಲ್ಯದ ಅಮೆರಿಕನ್​​​ ಡೈಮಂಡ್​​ (American Diamond) ಹರಳುಗಳಿಂದ ಗಣಪತಿ ಮೂರ್ತಿಯನ್ನು (Lord Ganesha Statue) ನಿರ್ಮಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ತರಲಾಗಿದೆ. ಈ ಅಮೆರಿಕನ್​​​ ಡೈಮಂಡ್​​ ಮೂರ್ತಿಯನ್ನು ಬೆಂಗಳೂರಿನ ರಾಜಾಜಿನಗರ 2ನೇ ಹಂತದ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡುತ್ತದೆ.

ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್​​ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೇರಿಕನ್ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ಹುಬ್ಬಳ್ಳಿಯಲ್ಲಿ ತಯಾರಿಸಿಕೊಂಡು, ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿ ಏಳು ದಿನಗಳವರೆಗೆ ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ಮಾಡುತ್ತಾ ಬಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ಗಣೇಶೋತ್ಸವಕ್ಕೆ 18 ಷರತ್ತು, ಮಾರ್ಪಾಡು ಮಾಡುವಂತೆ ಮನವಿ ಮಾಡಿದ ಸಮಿತಿ

ಅದೇ ರೀತಿ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್​​ ಡೈಮಂಡ ಹಾಗೂ ನವರತ್ನ ಹರಳುಗಳಿಂದ ಐಶ್ವರ್ಯ ಗಣೇಶ ಮಾದರಿಯಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ