ಹುಬ್ಬಳ್ಳಿ ಸೆ.16: ವಾಣಿಜ್ಯನಗರಿ ಹುಬ್ಬಳ್ಳಿಯ (Hubballi) ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು 12 ಲಕ್ಷ ರೂ. ಮೌಲ್ಯದ ಅಮೆರಿಕನ್ ಡೈಮಂಡ್ (American Diamond) ಹರಳುಗಳಿಂದ ಗಣಪತಿ ಮೂರ್ತಿಯನ್ನು (Lord Ganesha Statue) ನಿರ್ಮಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ (Bengaluru) ತರಲಾಗಿದೆ. ಈ ಅಮೆರಿಕನ್ ಡೈಮಂಡ್ ಮೂರ್ತಿಯನ್ನು ಬೆಂಗಳೂರಿನ ರಾಜಾಜಿನಗರ 2ನೇ ಹಂತದ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘ ಸೆ.18 ರಂದು ಪ್ರತಿಷ್ಠಾಪನೆ ಮಾಡುತ್ತದೆ.
ಗಣೇಶ ಮೂರ್ತಿ 5.7 ಅಡಿ ಎತ್ತರವಿದ್ದು, ಸುಮಾರು 150 ಕೆಜಿ ತೂಕ ಇದೆ. ಮುಖವೊಂದನ್ನು ಬಿಟ್ಟು ಇನ್ನುಳಿದ ಎಲ್ಲ ಭಾಗವನ್ನು ಅಮೆರಿಕನ್ ಡೈಮಂಡ್ ಹರಳು, ನವರತ್ನ ಹರಳುಗಳಿಂದ ತಯಾರಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಬೆಂಗಳೂರಿನ ಸ್ವಸ್ತಿಕ ಯುವಕರ ಸಂಘ ಅಮೇರಿಕನ್ ಡೈಮಂಡ್ ಹರಳುಗಳಿಂದ ಗಣೇಶ ಮೂರ್ತಿಯನ್ನು ಹುಬ್ಬಳ್ಳಿಯಲ್ಲಿ ತಯಾರಿಸಿಕೊಂಡು, ರೈಲಿನ ಮೂಲಕ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿ ಏಳು ದಿನಗಳವರೆಗೆ ಅದ್ದೂರಿಯಾಗಿ ಗಣೇಶೋತ್ಸವ ಆಚರಣೆ ಮಾಡುತ್ತಾ ಬಂದಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಗಣೇಶೋತ್ಸವಕ್ಕೆ 18 ಷರತ್ತು, ಮಾರ್ಪಾಡು ಮಾಡುವಂತೆ ಮನವಿ ಮಾಡಿದ ಸಮಿತಿ
ಅದೇ ರೀತಿ ಈ ವರ್ಷವೂ ಸಹ ಸುಮಾರು 60 ಸಾವಿರ ಅಮೆರಿಕನ್ ಡೈಮಂಡ ಹಾಗೂ ನವರತ್ನ ಹರಳುಗಳಿಂದ ಐಶ್ವರ್ಯ ಗಣೇಶ ಮಾದರಿಯಲ್ಲಿ ಮೂರ್ತಿಯನ್ನು ನಿರ್ಮಿಸಲಾಗಿದೆ. ಶುಕ್ರವಾರ ನಗರದಿಂದ ರೈಲಿನ ಮೂಲಕ ಮೂರ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ